More

    ಗ್ವಾತಗಿಯಲ್ಲಿ ಸ್ಮಶಾನಕ್ಕೆ ಒಂದು ಎಕರೆ ಭೂಮಿ: ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿಕೆ

    ಕುಷ್ಟಗಿ: ಜನರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.

    ತಾಲೂಕಿನ ಗ್ವಾತಗಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಜನರು ಸರ್ಕಾರಿ ಕಚೇರಿಗೆ ಅಲೆಯಬಾರದೆಂಬ ಕಾರಣದಿಂದ ಅವರಿದ್ದಲ್ಲಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಲು ಸರ್ಕಾರ ಕಾರ್ಯಕ್ರಮ ಆರಂಭಿಸಿದೆ. ಔಪಚಾರಿಕ ಕಾರ್ಯಕ್ರಮದಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ. ಸಮಸ್ಯೆ ಹೇಳಿಕೊಂಡು ಬಂದವರಿಗೆ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು. ಜನರೂ ಕಾರ್ಯಕ್ರಮದ ಸದುಪಯೋಗ ಪಡೆಯಬೇಕಿದೆ ಎಂದರು.

    ಕಳೆದ 40 ವರ್ಷಗಳಿಂದ ಗ್ವಾತಗಿ ಗ್ರಾಮಸ್ಥರು ರುದ್ರಭೂಮಿ ಸಮಸ್ಯೆ ಎದುರಿಸುತ್ತಿದ್ದರು. ಸ್ಮಶಾನಕ್ಕಾಗಿ ಒಂದು ಎಕರೆ ಜಮೀನು ಖರೀದಿಸಿ ಮೀಸಲಿಡಲಾಗಿದೆ ಎಂದು ಡಿಸಿ ಸುಂದರೇಶ ಬಾಬು ತಿಳಿಸಿದರು. ಗ್ರಾಮದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ನಿರ್ಮಿಸಿರುವ ಕೊಠಡಿಗಳ ಜಾಗ ತಮ್ಮದೆಂದು ಖಾಸಗಿ ವ್ಯಕ್ತಿಯೊಬ್ಬರು ತಗಾದೆ ತಗೆದಿದ್ದಾರೆಂದು ಗ್ರಾಮಸ್ಥರು ತಿಳಿಸಿದರು. ಆ ವ್ಯಕ್ತಿಯ ಮನವೊಲಿಸಿ ಮೊದಲಿದ್ದ ಹಳೇ ಕೊಠಡಿಗಳನ್ನು ನೆಲಸಮಗೊಳಿಸಿ ತಲಾ 15ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಮೂರು ಕೊಠಡಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಗುರುರಾಜ ಛಲವಾದಿ ತಿಳಿಸಿದರು.

    ಗ್ರಾಮದ ಎಸ್ಸಿ-ಎಸ್ಟಿ ಕಾಲನಿಯಲ್ಲಿ ನೀರು ಮಡುಗಟ್ಟಿ ನಿಲ್ಲುತ್ತಿದ್ದು, ಬೇರೆಡೆ ಸಾಗುವಂತೆ ಕ್ರಮ ಕೈಗೊಳ್ಳುವುದು ಸೇರಿ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರು ಆಗ್ರಹಿಸಿದರು. ಜಿಪಂ ಸಿಇಒ ಫೌಜಿಯಾ ತರನ್ನುಮ್, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts