More

    ಜನಜಾಗೃತಿಗಾಗಿ ಕ್ರಿಕೆಟ್ ಪಂದ್ಯಾವಳಿ

    ಕುಷ್ಟಗಿ: ಯುವ ಹಾಗೂ ಅಂಗವಿಕಲರ ಮತದಾನ ಪ್ರಮಾಣ ಹೆಚ್ಚಿಸಲು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆಯ ಹೇಳಿದರು.

    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡಿದ್ದರಿಂದ ಶೇಕಡಾವಾರು ಮತದಾನ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಈ ಬಾರಿಯೂ ಪಂಜಿನ ಮೆರವಣಿಗೆ, ಆರೋಗ್ಯ ಶಿಬಿರ, ಮೇಣದಬತ್ತಿ ಹಚ್ಚುವುದು ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಯುವ ಹಾಗೂ ಅಂಗವಿಕಲ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸಕ್ಷಮ್ ಆ್ಯಪ್ ಮೂಲಕ ವಾಹನದ ವ್ಯವಸ್ಥೆ ಕಲ್ಪಿಸಲಾಗಿದೆ. ಮತದಾನ ಕುರಿತು ಜಾಗೃತಿ ಮೂಡಿಸಲು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು. ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಹಾನಗಲ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ನಿಂಗಪ್ಪ ಮಸಳಿ, ತಹಸೀಲ್ದಾರ್ ರವಿ ಅಂಗಡಿ, ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ, ಸಿಡಿಪಿಒ ಯಲ್ಲಮ್ಮ ಹಂಡಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಜಗದೀಶಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts