More

    ಕೃಷ್ಣಾ ಬಿ ಸ್ಕೀಂ ಕಾಮಗಾರಿ ಮುಂದುವರಿಸುವಂತೆ ರೈತರು ಒತ್ತಾಯ

    ವಿವಿಧ ರೈತ ಪರ ಸಂಘಟನೆಗಳ ಪದಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

    ಕುಷ್ಟಗಿ: ಕೃಷ್ಣಾ ಬಿ ಸ್ಕೀಂ ಯೋಜನೆಯ ಕಾಮಗಾರಿ ಮುಂದುವರಿಸುವಂತೆ ಒತ್ತಾಯಿಸಿ ವಿವಿಧ ರೈತ ಪರ ಸಂಘಟನೆಗಳ ಪದಾಧಿಕಾರಿಗಳು ಪಟ್ಟಣದ ತಹಸಿಲ್ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಹಸಿಲ್ ಕಚೇರಿ ಆವರಣದಲ್ಲಿ ಸಮಾವೇಶಗೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಯೋಜನೆಯ ಕಾಮಗಾರಿಯನ್ನು ಇಳಕಲ್‌ವರೆಗೆ ಮಾತ್ರ ನಡೆಸಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಯಾವ ಉದ್ದೇಶಕ್ಕಾಗಿ ನಿಲ್ಲಿಸಲಾಗಿದೆ ಎಂಬುದು ಯಾವ ರೈತರಿಗೂ ಗೊತ್ತಾಗಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ಕಾಮಗಾರಿ ಮುಂದುವರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಾಗ್ಯೂ ಪ್ರಯೋಜನವಾಗಿಲ್ಲ. ಮಾ.3ರೊಳಗೆ ಕಾಮಗಾರಿ ಆರಂಭಿಸದಿದ್ದಲ್ಲಿ ಧರಣಿ ಆರಂಭಿಸುವುದಾಗಿ ಫೆ.24ರಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗಿತ್ತು. ಕಾಮಗಾರಿ ಆರಂಭಿಸುವ ಯಾವುದೇ ಲಕ್ಷಣ ಗೋಚರಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಬೇಕಾಯಿತು ಎಂದು ರೈತ ಮುಖಂಡರು ತಿಳಿಸಿದರು.

    ರೈತ ಸೇನೆಯ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಪುಟ್ಟಯ್ಯ ತಾವರಕೆರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಣ್ಣಪ್ಪಗೌಡ ದೇಸಾಯಿ, ರೈತ ಸಂಘದ ತಾಲೂಕು ಅಧ್ಯಕ್ಷ ನಿಂಗಪ್ಪ ಬೆಳವಣಿಕಿ, ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷರಾದ ಶಮ್‌ಶಾದ್ ಬೇಗಂ, ಮಲ್ಲಮ್ಮ ಹೆಬಸೂರ, ನರಗುಂದದ ಮಹದಾಯಿ ಸಮಿತಿಯ ಸದಸ್ಯ ವಿಜಯ ಕುಲಕರ್ಣಿ, ರೈತ ಸಂಘದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಅಕ್ಕಮಹಾದೇವಿ ಪಾಟೀಲ್, ಗದಗ ಜಿಲ್ಲಾ ಅಧ್ಯಕ್ಷ ವೀರನಗೌಡ ಪಾಟೀಲ್, ತಾಲೂಕು ಅಧ್ಯಕ್ಷ ನಿಂಗಪ್ಪ ಬೆಳವಣಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts