More

    ಅಪೌಷ್ಟಿಕತೆ ನಿವಾರಿಸಲು ಸರ್ಕಾರದ ಜತೆ ಕೈ ಜೋಡಿಸಲು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಸಲಹೆ

    ಕುಷ್ಟಗಿ: ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ನಿವಾರಿಸಲು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

    ಹಿರೇಬನ್ನಿಗೋಳ ಗ್ರಾಮದ ಅಟಲ್‌ಜಿ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಚಳಗೇರಾ ಎ ವಲಯದ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಪೌಷ್ಟಿಕ ಆಹಾರದ ಮಹತ್ವ ತಿಳಿಸಲು ಸರ್ಕಾರ ಅಭಿಯಾನ ಹಮ್ಮಿಕೊಂಡಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅಭಿಯಾನ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ಗ್ರಾಮೀಣ ಜನ ಜಾಗೃತಗೊಂಡು ಮಕ್ಕಳಿಗೆ ಹಾಗೂ ಗರ್ಭಿಣಿ-ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಿ ಶಿಶು ಹಾಗೂ ತಾಯಿ ಮರಣ ಪ್ರಮಾಣ ನಿಯಂತ್ರಿಸುವಲ್ಲಿ ಸರ್ಕಾರದ ಜತೆ ಕೈ ಜೋಡಿಸಬೇಕಿದೆ ಎಂದರು.

    ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಯ್ಯ ಹಿರೇಮಠ ಮಾತನಾಡಿ, ಅಭಿಯಾನ ಮೂಲಕ ಪ್ರತಿ ವಲಯದಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ಚಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶರಣಪ್ಪ ಮೂಲಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಸೋಮಶೇಖರ ಮೇಟಿ, ಅಂಗನವಾಡಿ ಮೇಲ್ವಿಚಾರಕಿಯರಾದ ಶಕುಂತಲಾ ಪೂಜಾರ್, ಮಂಜುಳಾ ಅಕ್ಕಿ, ಅನ್ನಪೂರ್ಣ ಮಾಲಿಪಾಟೀಲ್, ಎಪಿಜೆ ಅಬ್ದುಲ್ ಕಲಾಂ ಸಂಸ್ಥೆಯ ಅಧ್ಯಕ್ಷೆ ಇಮಾಮ್ ಬಿ, ಗುತ್ತಿಗೆದಾರ ರೆಹೆಮಾನಸಾಬ್ ದೊಡ್ಡಮನಿ, ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

    ಗಮನಸೆಳೆದ ಪ್ರಮುಖರು: ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆದ ಜಾಗೃತಿ ಜಾಥಾದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ, ಸಿಡಿಪಿಒ ವಿರೂಪಾಕ್ಷಯ್ಯ ಹಿರೇಮಠ, ಪಿಎಚ್‌ಸಿ ವೈದ್ಯಾಧಿಕಾರಿ ಶರಣಪ್ಪ ಮೂಲಿಮನಿ ಡೊಳ್ಳು ಬಾರಿಸಿ ಗಮನ ಸೆಳೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts