More

    ‘ನಮ್ಮ ಕ್ಲಿನಿಕ್’ ಪ್ರಯೋಜನ ಪಡೆಯಿರಿ: ಶಾಸಕ ಅಮರೇಗೌಡ ಬಯ್ಯಾಪುರ ಸಲಹೆ

    ಕುಷ್ಟಗಿ: ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿ ಜತೆಗೆ ವಿವಿಧೆಡೆ ಆಸ್ಪತ್ರೆ ಸೌಲಭ್ಯ ಕಲ್ಪಿಸುತ್ತಿದೆ. ದೂರದ ನಗರಗಳ ಖಾಸಗಿ ಹಾಸ್ಪಿಟಲ್‌ಗಳಿಗೆ ತೆರಳುವ ಬದಲು ಸ್ಥಳೀಯ ಆಸ್ಪತ್ರೆಗಳ ಸದುಪಯೋಗ ಪಡೆಯಬೇಕಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.

    ಪಟ್ಟಣದ ತೆಗ್ಗಿನ ಓಣಿಯಲ್ಲಿ ‘ನಮ್ಮ ಕ್ಲಿನಿಕ್’ಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಗ್ರಾಪಂ ಕೇಂದ್ರ ಸ್ಥಾನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಲ್ಲಲ್ಲಿ ಉಪಕೇಂದ್ರ ತೆರೆದು ಗ್ರಾಮೀಣರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ‘ನಮ್ಮ ಕ್ಲಿನಿಕ್‌‘ ಆರಂಭಿಸಲಾಗಿದೆ. ಪ್ರತ್ಯೇಕ ವೈದ್ಯರು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ತಾಲೂಕು ವೈದ್ಯಾಧಿಕಾರಿ ಆನಂದ್ ಗೋಟೂರು ಮಾತನಾಡಿ, ‘ನಮ್ಮ ಕ್ಲಿನಿಕ್’ನಲ್ಲಿ ಒಬ್ಬ ವೈದ್ಯಾಧಿಕಾರಿ, ಆರೋಗ್ಯ ಸಹಾಯಕರು, ಪ್ರಯೋಗಶಾಲಾ ತಂತ್ರಜ್ಞ, ಡಿ ದರ್ಜೆ ನೌಕರರೊಬ್ಬರು ಕಾರ್ಯನಿರ್ವಹಿಸಲಿದ್ದಾರೆ. ಬೆಳಗ್ಗೆ 9 ರಿಂದ ಸಂಜೆ 4.30ರವರೆಗೆ ಸೇವೆ ಒದಗಿಸುವ ಕ್ಲಿನಿಕ್‌ನಲ್ಲಿ 12 ಪ್ರಮುಖ ಹಾಗೂ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು. ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ, ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ, ಸದಸ್ಯ ಮೆಹಬೂಬ್, ವೈದ್ಯಾಧಿಕಾರಿ ಸೋಮನಾಥ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts