ಒಂದೇ ಎಂಬ ಭಾವನೆ ಮೂಡಿಸುವುದೇ ಜಾತ್ರೆಯ ಉದ್ದೇಶ

ಕುಷ್ಟಗಿ: ಜನರನ್ನು ಒಗ್ಗೂಡಿಸಿ ನಾವೆಲ್ಲ ಒಂದೇ ಎಂಬ ಭಾವನೆ ಮೂಡಿಸುವುದೇ ಜಾತ್ರೆಯ ಉದ್ದೇಶವಾಗಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ನಿಡಶೇಸಿ ಗ್ರಾಮದ ಚನ್ನಬಸವ ಶಿವಯೋಗಿಗಳ ಪುಣ್ಯಾರಾಧನೆ, ರಥೋತ್ಸವ ಹಾಗೂ ಸಾಮೂಹಿಕ ವಿವಾಹ ನಿಮಿತ್ತ ಸೋಮವಾರ ಆಯೋಜಿಸಿದ್ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.ಧರ್ಮವನ್ನು ನಿಷ್ಠೆಯಿಂದ ಪರಿಪಾಲಿಸುವವರನ್ನು ಧರ್ಮವೇ ಕಾಪಾಡುತ್ತದೆ. ಧರ್ಮದ ಹೆಸರಿನಲ್ಲಿ ಇತ್ತೀಚೆಗೆ ಕೆಲವರು ದೇಶದ್ರೋಹದ ಕೆಲಸ ಮಾಡುತ್ತಿರುವುದು ವಿಷಾದನೀಯ ಸಂಗತಿ. ಉಗ್ರರು ದೇಶದ ಸೈನಿಕರನ್ನು ಹತ್ಯೆಗೈದಿರುವುದನ್ನು ಈ ದೇಶ ಎಂದೂ ಮರೆಯುವುದಿಲ್ಲ. ಸರಿಯಾದ ಉತ್ತರ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದರು.

ಚಳಗೇರಿಯ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯರು, ಶ್ರೀಮಠದ ಶ್ರೀ ಚನ್ನಬಸವ ಶಿವಾಚಾರ್ಯರು, ಪಟ್ಟಣದ ಮದ್ದಾನೇಶ್ವರ ಮಠದ ಶ್ರೀ ಕರಿಬಸವ ಶಿವಾಚಾರ್ಯರು ಸೇರಿ ವಿವಿಧ ಮಠಾಧೀಶರು ಹಾಗೂ ಪ್ರಮುಖರು ಇದ್ದರು.