ಕುಷ್ಟಗಿ: ಖಾಸಗಿ ಶಾಲೆಗಳಿಗೆ ಸರ್ಕಾರ ನೆರವು ನೀಡಲು ಮುಂದಾಗಬೇಕು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.
ಪಟ್ಟಣದ ಬುತ್ತಿಬಸವೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಅನುದಾನ ರಹಿತ ಶಾಲಾ ಸಂಸ್ಥೆಗಳ ಒಕ್ಕೂಟ, ಖಾಸಗಿ ಶಾಲಾ ಶಿಕ್ಷಕರ ಮತ್ತು ಶಿಕ್ಷಕೇತರ ಸಂಘ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಖಾಸಗಿ ಶಾಲೆಗಳ ಮುಖ್ಯಸ್ಥರು ಒಗ್ಗಟ್ಟಿನಿಂದ ಹೋರಾಡಿ ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಬೇಕಿದೆ. ಹೋರಾಟಕ್ಕೆ ಬೆಂಬಲವಿದೆ ಎಂದರು.
ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಪಾಲಕರು ಖಾಸಗಿ ಶಾಲೆಗಳ ಮೇಲೆ ಅಪಾರವಾದ ವಿಶ್ವಾಸ ಇಟ್ಟಿದ್ದಾರೆ. ಅದಕ್ಕೆ ಧಕ್ಕೆಯಾಗದಂತೆ ಶಿಕ್ಷಣ ನೀಡುವ ಕಾರ್ಯವಾಗಬೇಕು ಎಂದರು.
ಅನುದಾನ ರಹಿತ ಶಾಲಾ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ರಾಘವೇಂದ್ರ ಪಾನಘಂಟಿ ವಿಶೇಷ ಉಪನ್ಯಾಸ ನೀಡಿದರು. ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯರು, ಪಟ್ಟಣದ ಮದ್ದಾನೇಶ್ವರ ಮಠದ ಕರಿಬಸವ ಶಿವಾಚಾರ್ಯರು, ವಿಜಯ ವಿಠ್ಠಲ ವಿದ್ಯಾಮಂದಿರದ ಹನುಮಂತಪ್ಪ ಯಾಳವಾರ, ಮಾಜಿ ಶಾಸಕ ಕೆ.ಶರಣಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಶ್ ಪತ್ತಾರ್, ಪ್ರಮುಖ ಸಿ.ವಿ ಚಂದ್ರಶೇಖರ, ಬಿಇಒ ಸುರೇಂದ್ರ ಕಾಂಬಳೆ, ಬಿಆರ್‌ಸಿ ಸಮನ್ವಯಾಧಿಕಾರಿ ಎಂ.ಜಗದೀಶಪ್ಪ, ತಾಲೂಕು ಒಕ್ಕೂಟದ ಅಧ್ಯಕ್ಷ ಶಿವನಗೌಡ ಪಾಟೀಲ್, ಪದಾಧಿಕಾರಿಗಳಾದ ಹನುಮಂತಪ್ಪ ತೋಟದ್, ನಾಗರಾಜ ಮಾಟಲದಿನ್ನಿ, ಎ.ವೈ.ಲೋಕರೆ, ಕೆ.ವೈ ಕಂದಕೂರು, ಶ್ರೀನಿವಾಸ ಜಹಗೀರದಾರ ಇತರರಿದ್ದರು.