More

    ಹಕ್ಕು, ಕರ್ತವ್ಯ ಒಂದೇ ನಾಣ್ಯದ ಎರಡು ಮುಖಗಳು ಎಂದ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ

    ಕುಷ್ಟಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬದುಕು ಕಟ್ಟಿಕೊಳ್ಳಬೇಕಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.

    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಕ್ಕೆ ಸಂವಿಧಾನ ದಯಪಾಲಿಸಿದ ದಿನದ ಸವಿನೆನಪಿಗಾಗಿ ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಹಕ್ಕುಗಳನ್ನು ಅನುಭವಿಸುವುದರ ಜತೆಗೆ ಕರ್ತವ್ಯ ನಿರ್ವಹಣೆಯನ್ನೂ ಮಾಡಬೇಕಿದೆ ಎಂದರು.

    ತಹಸೀಲ್ದಾರ್ ಎಂ.ಸಿದ್ದೇಶ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೋವಿಡ್ ತುರ್ತು ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ತಾಪಂ ಇಒ ಜಯರಾಮ್ ಚವ್ಹಾಣ, ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ಬಿಇಒ ಎಂ.ಚನ್ನಬಸಪ್ಪ, ಸಿಡಿಪಿಒ ಅಮರೇಶ ಹಾವಿನ್, ಪುರಸಭೆ ಮುಖ್ಯಾಧಿಕಾರಿ ಉಮೇಶ ಹಿರೇಮಠ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts