More

    ನಿಡಶೇಸಿ ಗ್ರಾಮದಲ್ಲಿ ಬಸ್ ಅಡ್ಡಗಟ್ಟಿ ವಿದ್ಯಾರ್ಥಿಗಳ ಪ್ರತಿಭಟನೆ

    ಕುಷ್ಟಗಿ: ಶಾಲಾ ಸಮಯಕ್ಕೆ ಪ್ರತ್ಯೇಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಿಡಶೇಸಿ ಗ್ರಾಮದ ವಿದ್ಯಾರ್ಥಿಗಳು ಮಂಗಳವಾರ ಗ್ರಾಮ ಮಾರ್ಗವಾಗಿ ತೆರಳುತ್ತಿದ್ದ ಕುಷ್ಟಗಿ-ಬಾದಾಮಿ ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು.

    ಗ್ರಾಮದ ವಿದ್ಯಾರ್ಥಿಗಳು ಪ್ರೌಢಶಾಲೆಗೆ ಪಕ್ಕದ ತಳುವಗೇರಾ ಗ್ರಾಮಕ್ಕೆ ತೆರಳುತ್ತಿದ್ದು, ಬೆಳಗ್ಗೆ ಶಾಲಾ ಸಮಯಕ್ಕೆ ಬಂದ ಬಸ್ ಗಳೆಲ್ಲವೂ ಕುಷ್ಟಗಿಯಿಂದಲೇ ಭರ್ತಿಯಾಗಿ ಬಂದಿದ್ದರಿಂದ ಸ್ಥಳಾವಕಾಶ ಇರಲಿಲ್ಲ. ಹೀಗಾಗಿ ನಂತರ ಬಂದ ಬಾದಾಮಿ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಪೇದೆ ಎದುರು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ಭೇಟಿ ನೀಡಿದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಘಟಕ ವ್ಯವಸ್ಥಾಪಕರನ್ನು ಕರೆಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು. ಇನ್ನೆರಡು ದಿನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಘಟಕ ವ್ಯವಸ್ಥಾಪಕ ಜಡೇಶ್ ಭರವಸೆ ನೀಡಿದರು. ಪಿಎಸ್‌ಐ ಮೌನೇಶ ರಾಠೋಡ್ ಇದ್ದರು.

    ಬಸ್ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸೆ.15ರಂದು ಸಾರಿಗೆ ಘಟಕಕ್ಕೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಗ್ರಾಮಕ್ಕೆ ಸಿಬ್ಬಂದಿ ಕಳುಹಿಸಿ ವಾಸ್ತವ ಸ್ಥಿತಿ ಅರಿತು ಮುಂದಿನ ಕ್ರಮ ಕೈಗೊಳ್ಳುವುದಾಗಿ ಘಟಕ ವ್ಯವಸ್ಥಾಪಕ ಜಡೇಶ್ ಭರವಸೆ ನೀಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts