More

    ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನಿಯೋಜನೆ; ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

    ಕುಷ್ಟಗಿ: ಜಿಲ್ಲೆಯ ತಾಲೂಕು ಆಸ್ಪತ್ರೆಗಳಿಗೆ ಕೊಪ್ಪಳದಲ್ಲಿರುವ ತಜ್ಞ ವೈದ್ಯರನ್ನು ನಿಯೋಜಿಸಲಾಗುವುದು. ಅಮಾನತ್ತಾಗಿದ್ದ ಅನಸ್ತೇಷಿಯಾ ವೈದ್ಯರನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

    ಪಟ್ಟಣದ ಕೋವಿಡ್ ಕೇರ್ ಸೆಂಟರ್‌ಗೆ ಶುಕ್ರವಾರ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪಟ್ಟಣದ ಕೋವಿಡ್ ಕೇರ್ ಸೆಂಟರ್‌ನಲ್ಲಿ 42 ಬೆಡ್‌ಗಳಿದ್ದು, 36 ಸೋಂಕಿತರು ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಇನ್ನೂ 20 ಬೆಡ್‌ಗಳನ್ನು ವ್ಯವಸ್ಥೆ ಮಾಡಲು ಅವಕಾಶ ಇದೆ. ಹೆಚ್ಚುವರಿ ಬೆಡ್‌ಗಳನ್ನು ಹಾಕಲಾಗುವುದು. ತಾಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಲ್ಲಿ 150 ಹಾಗೂ ತಾವರಗೇರಾದಲ್ಲಿ 30 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೊಪ್ಪಳದ ಗವಿಶ್ರೀಗಳು ಮಠದ ವಸತಿ ನಿಲಯದಲ್ಲಿ 100 ಬೆಡ್‌ಗಳ ವ್ಯವಸ್ಥೆ ಜತೆಗೆ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವುದಾಗಿಯೂ ಹೇಳಿದ್ದಾರೆ ಎಂದರು.

    ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ, ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್, ತಹಸೀಲ್ದಾರ್ ಎಂ.ಸಿದ್ದೇಶ, ಡಿಎಚ್‌ಒ ಲಿಂಗರಾಜ, ವೈದ್ಯರಾದ ಕೆ.ಎಸ್.ರಡ್ಡಿ, ಚಂದ್ರಕಾಂತ ಮಂತ್ರಿ ಮತ್ತು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts