ಬಿಜೆಪಿಯ ತಾಪಂ ಸದಸ್ಯರಿಗೆ ವ್ಹಿಪ್ ಜಾರಿ

ಕುಷ್ಟಗಿ: ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಹಾಂತಮ್ಮ ಪೂಜಾರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಜು.17ರಂದು ಸಭೆ ಕರೆಯಲಾಗಿದ್ದು, ಅಧ್ಯಕ್ಷೆ ಪರ ಮತ ಚಲಾಯಿಸುವಂತೆ ಪಕ್ಷದ ಸದಸ್ಯರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ವಿಪ್ ಜಾರಿ ಮಾಡಿದ್ದಾರೆ.

ಏಕಪಕ್ಷೀಯ ನಿರ್ಧಾರ, ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ, ತಾಪಂ ಸಿಬ್ಬಂದಿ ಜತೆ ಅನುಚಿತ ವರ್ತನೆ ಸೇರಿ ಇತರ ಕಾರಣಗಳೊಂದಿಗೆ ಕಳೆದ ಜೂ.16ರಂದು ತಾಪಂ ಇಒ ಕೆ.ತಿಮ್ಮಪ್ಪಗೆ ಸದಸ್ಯರು ಮನವಿ ಸಲ್ಲಿಸಿ ಅಧ್ಯಕ್ಷೆ ಮಹಾಂತಮ್ಮ ಪೂಜಾರ ಹಾಗೂ ಉಪಾಧ್ಯಕ್ಷೆ ಮಂಜುಳಾ ಪಾಟೀಲ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಭೆ ಕರೆಯುವಂತೆ ಕೋರಿದ್ದರು. ಅದಾಗಿ ಕೆಲ ದಿನಗಳ ನಂತರ ಉಪಾಧ್ಯಕ್ಷೆ ಮಂಜುಳಾ ಪಾಟೀಲ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಸದ್ಯ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಸಭೆ ನಡೆಯಲಿದ್ದು, ಬಿಜೆಪಿ ಬೆಂಬಲಿತ ಸದಸ್ಯರು ಪಕ್ಷದ ಆದೇಶ ಪಾಲಿಸುತ್ತಾರೆಯೇ ಅಥವಾ ಅಂದುಕೊಂಡಂತೆ ಅವಿಶ್ವಾಸ ಗೊತ್ತುವಳಿ ಮಂಡಿಸುತ್ತಾರೆಯೇ ಎಂಬುದೇ ಕುತೂಹಲ ಕೆರಳಿಸಿದೆ.

Leave a Reply

Your email address will not be published. Required fields are marked *