More

    ಸಾಧನೆಗೆ ಎಲ್ಲರೂ ಪ್ರೋತ್ಸಾಹಿಸಿ

    ಕುಷ್ಟಗಿ: ಗ್ರಾಮೀಣ ಭಾಗದ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಬಲೆ ಎಂಬುದನ್ನು ತೋರಿಸಿಕೊಡುತ್ತಿದ್ದಾರೆ ಎಂದು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸುಮಾ ಬ್ಯಾಳಿ ಹೇಳಿದರು. ತಾಲೂಕಿನ ಕಂದಕೂರು ಗ್ರಾಮದ ಮಾರುತಿ ದೇವಸ್ಥಾನ ಆವರಣದಲ್ಲಿ ಕ್ಲಬ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮನೆಯಿಂದ ಹೊರಗೆ ಬರಲು ಹಿಂಜರಿಯುತ್ತಿದ್ದ ಗ್ರಾಮೀಣ ಮಹಿಳೆಯರು ವಾಹನ ಚಾಲಕರಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ವಾಹನಗಳ ಚಾಲಕರಾಗಿ ಪುರುಷರಿಗಿಂತ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸುತ್ತಿದ್ದಾರೆ. ಅವರ ಕಾರ್ಯಕ್ಕೆ ಪ್ರೋತ್ಸಾಹಿಸಿ ಮಹಿಳೆಯರೂ ಸಮಾಜದ ಮುಖ್ಯಮಾಹಿನಿಗೆ ಬರುವಂತೆ ಪ್ರೇರೇಪಿಸಬೇಕಿದೆ ಎಂದರು. ದಿನಾಚರಣೆ ನಿಮಿತ್ತ ಗ್ರಾಪಂ ಪಿಡಿಒ, ಸಮುದಾಯ ಆರೋಗ್ಯ ಅಧಿಕಾರಿ, ಸಫಾಯಿ ಕರ್ಮಚಾರಿಗಳು, ವಾಹನ ಚಾಲಕಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಮಹಿಳಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅಡುಗೆ ಸಹಾಯಕಿಯರಿಗೆ ಸೀರೆ ಉಡುಗೊರೆ ನೀಡಿ ಸನ್ಮಾನಿಸಲಾಯಿತು. ವಿದ್ಯಾರ್ಥಿನಿಯರಿಗೆ ನೋಟ್ ಬುಕ್ಸ್ ನೀಡಿ ಕಲಿಕೆಗೆ ಪ್ರೋತ್ಸಾಹಿಸಲಾಯಿತು. ಕ್ಲಬ್ ಕಾರ್ಯದರ್ಶಿ ಗೌರಮ್ಮ ಕುಡತಿನಿ, ಸದಸ್ಯರಾದ ಡಾ.ಪಿ.ಎಂ.ಪಾರ್ವತಿ, ಅಡಿವೆಮ್ಮ ನಂದಿಕೋಲುಮಠ, ಪ್ರೇಮಾ ಪಾಟೀಲ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts