More

    ಕಾರಣ ಕೇಳಿ ಕಾಂಗ್ರೆಸ್ ಸದಸ್ಯರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದರು

    ಕುಷ್ಟಗಿ: ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಕಾರ್ಯಕರ್ತರು ನೀಡಿದ ದೂರಿನನ್ವಯ ಪಕ್ಷದ ಪುರಸಭೆ ಸದಸ್ಯರಾದ ಗೀತಾ ಶರಣಪ್ಪ ತುರಕಾಣಿ ಹಾಗೂ ವೀರೇಶ ಬೆದವಟ್ಟಿಗೆ ಕಾರಣ ಕೇಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ ನೋಟಿಸ್ ಜಾರಿ ಮಾಡಿದ್ದಾರೆ.

    ಬಿಜೆಪಿಯಲ್ಲಿ ಗುರುತಿಸಿಕೊಳ್ಳುತ್ತಿರುವುದು, ಬಿಜೆಪಿಯ ಆಮಿಷಕ್ಕೆ ಬಲಿಯಾಗಿರುವುದು ಗೊತ್ತಾಗಿದೆ. ನಮ್ಮ ಸದಸ್ಯರು ನಮ್ಮ ಪಕ್ಷದಲ್ಲಿಯೇ ಇರಬೇಕು ಎಂದು ಬಯಸುವುದು ಕಾರ್ಯಕರ್ತರ ಹಕ್ಕಾಗಿದೆ. ಆಯ್ಕೆಯಾದ ನಂತರ ಪಕ್ಷದಲ್ಲಿಯೇ ಮುಂದುವರಿಯುತ್ತಾರೆಂಬ ವಿಶ್ವಾಸದಿಂದ ಗೆಲುವಿಗೆ ಶ್ರಮಿಸಿದ್ದೇವೆ. ಪಕ್ಷಕ್ಕೆ ನಿಷ್ಠರಾಗಿ ಇರಬೇಕಾದದ್ದು ಅವರ ಕರ್ತವ್ಯವಾಗಿದೆ.

    ಆದರೆ, ಆಮಿಷಕ್ಕೆ ಬಲಿಯಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದು ನೋವು ಉಂಟು ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಸಾಬೀತಾದರೆ ಸದಸ್ಯರ ಮನೆ ಎದುರು ಪ್ರತಿಭಟಿಸುತ್ತೇವೆ. ಸದರಿ ಸದಸ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ 3ದಿನದೊಳಗಾಗಿ ಸ್ಪಷ್ಟನೆ ನೀಡದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

    ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಕಾರ್ಯಕರ್ತರು ನೀಡಿದ ದೂರಿನನ್ವಯ ಸದಸ್ಯರಾದ ಗೀತಾ ತುರಕಾಣಿ ಹಾಗೂ ವೀರೇಶ ಬೆದವಟ್ಟಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸ್ಪಷ್ಟನೆ ನೀಡದಿದ್ದಲ್ಲಿ ಪಕ್ಷದಿಂದ ಶಿಸ್ತು ಕ್ರಮ ಜರುಗಿಸಲಾಗುವುದು.
    | ದೇವೇಂದ್ರಪ್ಪ ಬಳೂಟಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕುಷ್ಟಗಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts