More

    ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಕೈಜೋಡಿಸಿ

    ಕುಷ್ಟಗಿ: ಲೋಕಸಭಾ ಚುನಾವಣೆಯಲ್ಲಿ ಶೇ.100 ಮತದಾನವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ, ತಾಪಂ ಇಒ ನಿಂಗಪ್ಪ ಮಸಳಿ ಹೇಳಿದರು.

    ಮತದಾನ ಜಾಗೃತಿಗಾಗಿ ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿರುವ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ಮತದಾನ ಕುರಿತು ಜಾಗೃತಿ ಮೂಡಿಸಲು ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆರ್‌ಡಿಪಿಆರ್ ನೌಕರರು ಹಾಗೂ ಸಿಬ್ಬಂದಿಯಿಂದ ಬೈಕ್ ರ‌್ಯಾಲಿ ಮೂಲಕ ಅರಿವು ಮೂಡಿಸಲಾಗುತ್ತಿದೆ. ಅರ್ಹ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕಾರ್ಯಕ್ಕೆ ಕೈಜೋಡಿಸಬೇಕಿದೆ ಎಂದರು.

    ಮಲ್ಲಯ್ಯ ವೃತ್ತದಿಂದ ಆರಂಭಗೊಂಡ ರ‌್ಯಾಲಿ, ವಿವಿಧ ವೃತ್ತಗಳ ಮಾರ್ಗವಾಗಿ ಸಾಗಿ ನಿಡಶೇಸಿ ನಂತರ ತಳುವಗೇರಾ ಗ್ರಾಮ ತಲುಪಿತು. ತಳುವಗೇರಾ ಗ್ರಾಮದ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ಗ್ರಾಪಂ ಪಿಡಿಒ ನಿಂಗಪ್ಪ ಮೂಲಿಮನಿ ಪ್ರತಿಜ್ಞಾವಿಧಿ ಬೋಧಿಸಿ ಜಾಗೃತಿ ಮೂಡಿಸಿದರು. ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಇದ್ದರು. ತಾಲೂಕಿನ ವಿವಿಧ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ವಿವಿಧ ನೌಕರರು ಬೈಕ್ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts