More

    ಸಿಎಂ ಬದಲಾವಣೆ ಪ್ರಸ್ತಾವನೆ ಸರಿಯಲ್ಲ; ಸಂಸದ ಸಂಗಣ್ಣ ಕರಡಿ ಅಭಿಮತ


    ಕುಷ್ಟಗಿ: ಕರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

    ಕೇಂದ್ರದಲ್ಲಿ ಬಿಜೆಪಿ ಏಳು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶ್ನಾತೀತ ನಾಯಕ. ಸದ್ಯದ ಪರಿಸ್ಥಿಯಲ್ಲಿ ಜನರ ಜೀವ ರಕ್ಷಣೆ ಮೊದಲ ಆದ್ಯತೆಯಾಗಬೇಕಿದೆ. ಈ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

    ಪಕ್ಷದ ಜಿಲ್ಲಾ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಮಾತನಾಡಿ, ಕಾಂಗ್ರೆಸ್ ಅಪಪ್ರಚಾರದಿಂದ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದಿದ್ದರು. ಇದೀಗ ವ್ಯಾಕ್ಸಿನ್ ಮಹತ್ವ ಅರಿತು ಜನರು ಮುಂದೆ ಬರುತ್ತಿದ್ದಾರೆ. ಇದರಿಂದಾಗಿ ಕೊರತೆಯಾಗುತ್ತಿದೆ ಎಂದರು. ಜಿಲ್ಲಾ ಉಪಾಧ್ಯಕ್ಷ ಕೆ.ಮಹೇಶ, ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ವಡಗೇರಿ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ ಯಾದವ್, ಪ್ರಮುಖರಾದ ಅಮರೇಗೌಡ ಪಾಟೀಲ್ ಜಾಲಿಹಾಳ, ಚನ್ನವೀರನಗೌಡ, ಲಂಕೇಶ ಗುಳದಾಳ ಮತ್ತು ಇತರರು ಇದ್ದರು.

    ಲಸಿಕಾ ಕೇಂದ್ರ ಬದಲಾವಣೆ: ತಾಲೂಕು ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದರಿಂದ ಅಲ್ಲೇ ಲಸಿಕೆ ಹಾಕುವುದು ಸುರಕ್ಷಿತವಲ್ಲ. ಹೀಗಾಗಿ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಲಸಿಕಾ ಕೇಂದ್ರ ಆರಂಭಿಸಬೇಕೆಂದು ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ಸಲಹೆ ನೀಡಿದರು. ಸಂಸದ ಸಂಗಣ್ಣ ಕರಡಿ ಹಾಗೂ ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಅಲ್ಲೇ ವ್ಯಾಕ್ಸಿನ್ ಕೇಂದ್ರ ಆರಂಭಿಸುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts