More

    ಬೆಂಬಲ ಬೆಲೆಯಲ್ಲಿ ಸಜ್ಜೆ, ಮೆಕ್ಕೆಜೋಳ ಖರೀದಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಸೈನ್ಯ ಒತ್ತಾಯ

    ಕುಷ್ಟಗಿ: ಬೆಂಬಲ ಬೆಲೆ ಯೋಜನೆಯಡಿ ಸಜ್ಜೆ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಯುವ ಸೈನ್ಯದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಗ್ರೇಡ್ 2 ತಹಸೀಲ್ದಾರ್ ವಿಜಯಾ ಮುಂಡರಗಿಗೆ ಸೋಮವಾರ ಸಲ್ಲಿಸಿದರು.

    ಜಿಲ್ಲೆಯ ರೈತರು ಮುಂಗಾರು ಹಂಗಾಮಿಗೆ ಅತಿ ಹೆಚ್ಚು ಸಜ್ಜೆ ಹಾಗೂ ಮೆಕ್ಕೆಜೋಳ ಬೆಳೆದಿದ್ದು, ಉತ್ತಮ ಫಸಲು ಕೈಸೇರಿದೆ. ಆದರೆ, ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ದರ ಕುಸಿತ ಕಂಡಿದೆ. ಬೆಂಬಲ ಬೆಲೆ ಯೋಜನೆ ಅಡಿ ಸರ್ಕಾರ ಖರೀದಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ರಸಗೊಬ್ಬರ ಮಾರಾಟಗಾರರು ಯೂರಿಯಾ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದ್ದು, ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪರವಾನಗಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ವೇದಿಕೆಯ ಜಿಲ್ಲಾ ಅಧ್ಯಕ್ಷ ಹುಲಗಪ್ಪ ಚೂರಿ, ತಾಲೂಕು ಅಧ್ಯಕ್ಷ ನಾಗರಾಜ ಉಪ್ಪಾರ, ಉಪಾಧ್ಯಕ್ಷ ಅಮರೇಶ್ವರ ನಾಗರಾಳ, ಯುವ ಘಟಕದ ಅಧ್ಯಕ್ಷ ಮನ್ಸೂರಸಾಬ ಗುಮಗೇರಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts