More

    ವಿಶ್ವಮಾನವ ಸಂದೇಶ ನಾಡಿಗೆ ಸಾರುವಂತಾಗಲಿ: ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಹೇಳಿಕೆ

    ಮಂಡ್ಯ: ಇಂದಿನ ಕಾಲಘಟ್ಟದಲ್ಲಿ ಕುವೆಂಪು ಅವರ ವಿಶ್ವಮಾನವ ಸಂದೇಶನ್ನ ಇಡೀ ನಾಡಿಗೆ ಸಾರುವಂತಹ ಕೆಲಸ ನಿರಂತರವಾಗಿ ಆಗಬೇಕಿದೆ ಎಂದು ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಹೇಳಿದರು.
    ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ನಗರದ ರೈತ ಸಭಾಂಗಣದ ಆವರಣದಲ್ಲಿರುವ ರಾಷ್ಟ್ರಕವಿ ಕುವೆಂಪು ಪ್ರತಿಮೆ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಕಸಾಪ, ಕೃಷಿಕ ಲಯನ್ಸ್ ಸಂಸ್ಥೆ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
    ಪ್ರಸ್ತುತ ವಿದ್ಯಾರ್ಥಿಗಳು, ಯುವ ಸಮುದಾಯ, ಸಾರ್ವಜನಿಕರಿಗೆ ಸೇರಿಂತೆ ಎಲ್ಲರಿಗೂ ರಾಷ್ಟಕವಿ ಕುವೆಂಪು ಅವರ ವೈಜ್ಞಾನಿಕ ಸಂದೇಶವನ್ನ ನಿರಂತರವಾಗಿ ಪ್ರಚುರಪಡಿಸುವ ಸುಕಾರ್ಯ ಆಗಬೇಕಿದೆ. ಇಂದಿನ ಕಾಲಘಟ್ಟದಲ್ಲಿ ಕೋಮುಭಾವನೆಗಳನ್ನು ಕೆರಳಿಸುವಷ್ಟು ಕಲಸ ಆಗುತ್ತಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೂಡ ಜೀವನದಲ್ಲಿ ಕುವೆಂಪು ಅವರ ವೈಜ್ಞಾನಿಕ, ವೈಚಾರಿಕ ಚಿಂತನೆಗಳು, ವಿಶ್ವಮಾನವ ಸಂದೇಶಗಳನ್ನು ಅರಿತು ಬಾಳಬೇಕಿದೆ ಎಂದು ತಿಳಿಸಿದರು.
    ಕುವೆಂಪು ಅವರ ಬಗ್ಗೆ ಸಾಕಷ್ಟು ಮಾಹಿತಿ ಎಲ್ಲರಿಗೂ ತಿಳಿದಿದೆ. ಕನ್ನಡ ಸಾರಸತ್ವ ಲೋಕಕ್ಕೆ ಮೊದಲ ಜ್ಞಾನಪೀಠ ಪುರಸ್ಕರ ತಂದುಕೊಟ್ಟವರು. 2ನೇ ರಾಷ್ಟ್ರಕವಿ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಜನ್ಮದಿನವನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗೋಣ. ವಿಶ್ವ ಮಾನವ ಸಂದೇಶವನ್ನು ಜಗತ್ತಿಗೆ ಬಿತ್ತರಿಸುವ ಕಾರ್ಯ ಮಾಡುವು ಮೂಲಕ ಕುವೆಂಪು ಅವರನ್ನು ಸ್ಮರಿಸಿಕೊಳ್ಳೋಣ ಎಂದರು.
    ಸಾಹಿತಿ ಡಾ.ಪ್ರದೀಪ್‌ಕುಮಾರ್ ಹೆಬ್ರಿ, ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ, ಪ್ರೊ.ಡೇವಿಡ್, ಮಂಜು ಮುತ್ತಗೆರೆ, ಸುಜಾತಾಕೃಷ್ಣ, ಅಂಜನಾ, ಶ್ರೀನಿವಾಸ್ ಶೆಟ್ಟಿ, ಲಿಂಗಣ್ಣ ಬಂಧುಕರ್, ಧರಣೇಂದ್ರಯ್ಯ ಇತರರಿದ್ದರು. ಇದೇ ಸಂದರ್ಭದಲ್ಲಿ ಕನ್ನಡ ಪ್ರಾಧ್ಯಾಪಕ ಡಾ.ಶಂಕರೇಗೌಡ ಅವರನ್ನು ಗಣ್ಯರು ಅಭಿನಂದಿಸಿದರು. ಕುವೆಂಪು ವಿರಚಿತ ಹಲವು ಗೀತೆಗಳನ್ನು ಹಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts