More

    ಕುವೆಂಪು ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮ

    ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಡಿ.29ರಂದು ವಿಶ್ವ ಮಾನವ ದಿನ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅಧಿಕಾರಿಗಳಿಗೆ ಸೂಚಿಸಿದರು.

    ಇದನ್ನೂ ಓದಿ: ಕುವೆಂಪು ನಾಡಿನ ಶ್ರೇಷ್ಠ ಸಾಹಿತಿ

    ನಗರದ ಜಿಲ್ಲಾಡಳಿತ ಭವನದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಗುರುವಾರ ಮಾತನಾಡಿದರು.

    ರಾಷ್ಟ್ರಕವಿ ಕುವೆಂಪು ಜನ್ಮ ದಿನ ನಿಮಿತ್ತ ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತದೆ. ಡಿ.29ರಂದು ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಜಿಲ್ಲೆಯ ಎಲ್ಲ ಸಾಹಿತಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮ ವಹಿಸಬೇಕು.

    ವಿದ್ಯಾರ್ಥಿಗಳಿಂದ ಕುವೆಂಪು ವಿರಚಿತ ಹಾಡುಗಳಿಗೆ ನೃತ್ಯರೂಪಕ, ಕುವೆಂಪು ರಚಿಸಿದ ಕವನ, ಹಾಡುಗಳನ್ನು ಪ್ರಸ್ತುತ ಪಡಿಸಲು ಕಲಾವಿದರಿಗೆ ಸೂಚಿಸಬೇಕು. ಉಪನ್ಯಾಸ ನೀಡಲು ಉಪನ್ಯಾಸಕರನ್ನು ನಿಯೋಜಿಸಬೇಕು. ಅರ್ಥಪೂರ್ಣ ಜಯಂತಿ ಆಚರಣೆಗೆ ಕ್ರಮಕೈಗೊಳ್ಳಬೇಕು ಎಂದರು.

    ಜಿಲ್ಲಾ ಕೇಂದ್ರದಲ್ಲಿ ಮಾತ್ರವಲ್ಲದೆ ಜಿಲ್ಲೆಯ ಎಲ್ಲ ಇಲಾಖೆಗಳ ಕಚೇರಿಗಳು ಹಾಗೂ ಅಧೀನ ಕಚೇರಿ, ಶಾಲಾ, ಕಾಲೇಜು, ವಸತಿ ನಿಲಯ, ಸಾರಿಗೆ ಘಟಕ, ಗ್ರಾಪಂಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು.

    ಸಾಹಿತ್ಯ ಭವನದ ಸ್ವಚ್ಛತೆ, ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕುಡಿವ ನೀರು ಒದಗಿಸಲು ನಗರಸಭೆ ಪೌರಾಯುಕ್ತರು, ಬಂದೋಬಸ್ತ್‌ಗೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಗಣ್ಯರ ಆಹ್ವಾನಕ್ಕೆ ತಹಸೀಲ್ದಾರ್ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಾಹಿತಿಗಳಾದ ಎಂ.ಬಿ. ಅಳವಂಡಿ, ಸಾವಿತ್ರಿ ಮುಜುಮದಾರ್, ನಟರಾಜ ಸೋನಾರ್, ಎಚ್.ಎಸ್.ಪಾಟೀಲ್, ಜಿ.ಎಸ್.ಗೋನಾಳ, ಸಿರಾಜ್ ಬಿಸರಳ್ಳಿ, ಡಾ.ಕೆ.ಬಿ. ಬ್ಯಾಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts