More

    ಬಂಗಾಳಿ ಲೇಖಕ ಶೀರ್ಷೇಂದು ಮುಖ್ಯೋಪಾಧ್ಯಾಯಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

    ಬೆಂಗಳೂರು: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕೊಡಮಾಡುವ ಪ್ರತಿಷ್ಠಿತ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ-2023’ಕ್ಕೆ ಬಂಗಾಳಿ ಬರಹಾಗಾರ ಶೀರ್ಷೇಂದು ಮುಖ್ಯೋಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ.

    ಈ ಪುರಸ್ಕಾರವು ಐದು ಲಕ್ಷ ರೂ. ನಗದು ಹಾಗೂ ಬೆಳ್ಳಿ ಪದಕ ಒಳಗೊಂಡಿದೆ. ಕುವೆಂಪು ಅವರ ಜನ್ಮದಿನವಾದ ಡಿ.29ರಂದು ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

    ಶೀರ್ಷೇಂದು ಮುಖ್ಯೋಪಾಧ್ಯಾಯ ಅವರು ತಮ್ಮ ಹೊಸತನದ ಬರವಣಿಗೆಗಳ ಮೂಲಕ ಬಂಗಾಳಿ ಸಾಹಿತ್ಯವನ್ನು, ತನ್ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸಕಥನ, ಮಕ್ಕಳ ಪುಸ್ತಕಗಳು ಸೇರಿ ಸುಮಾರು 90 ಕೃತಿಗಳನ್ನು ಹೊರತಂದಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ ಸೇರಿ ಹಲವು ಪುರಸ್ಕಾರಕ್ಕೆ ಭಾಜನರಾಗಿರುವ ಶೀರ್ಷೇಂದು ಮುಖ್ಯೋಪಾಧ್ಯಾಯ ಅವರನ್ನು ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts