More

    ಸಂಪದ್ಭರಿತ ದೇಶ ಕಟ್ಟಲು ಪಣತೊಡೋಣ: ಮಾಜಿ ಸಭಾಪತಿ ಶಂಕರಮೂರ್ತಿ

    ಶಿವಮೊಗ್ಗ: ಪ್ರಸ್ತುತ ಎದುರಾಗಿರುವ ಅನೇಕ ಸಮಸ್ಯೆಗಳನ್ನು ಬಗೆಹರಿಸಿ ಸಂಪನ್ಮೂಲ ಸೃಷ್ಟಿಸಿ ಸಂಪದ್ಭರಿತ ದೇಶ ನಿರ್ಮಿಸುವತ್ತ ಪ್ರತಿಯೊಬ್ಬರೂ ಹೆಜ್ಜೆ ಹಾಕಬೇಕಿದೆ ಎಂದು ವಿಧಾನ ಪರಿಷತ್‌ನ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಭಿಪ್ರಾಯಪಟ್ಟರು.
    ಕುವೆಂಪು ವಿವಿಯಲ್ಲಿ ಭಾನುವಾರ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಒಂದು ಕಾಲದಲ್ಲಿ ಭಾರತವು ಆಹಾರ-ಬೇಳುಕಾಳುಗಳಿಗೆ ಬೇರೆ ದೇಶಗಳನ್ನು ಆಶ್ರಯಿಸಿತ್ತು. ಆದರೆ ಇಂದು ಹಸಿರು ಕ್ರಾಂತಿ ಮೂಲಕ ಆಹಾರೋತ್ಪನಗಳನ್ನು ರಫ್ತು ಮಾಡುತ್ತಿದ್ದೇವೆ. ದೇಶವು ಸಮೃದ್ಧಿ ತಲುಪುವ ಹಾದಿಯತ್ತ ಮತ್ತಷ್ಟು ಬದ್ಧತೆಯಿಂದ, ಯೋಜಿತವಾಗಿ ಹೆಜ್ಜೆಯಿಡಬೇಕಿದೆ ಎಂದರು.
    ಸ್ವಾತಂತ್ರೃ ಪಡೆದಾಗ ಅಲ್ಪಪ್ರಮಾಣದ ಅಕ್ಷರಸ್ಥರು, ಕೆಲವೇ ಶಾಲೆ-ಕಾಲೇಜುಗಳಿದ್ದವು. ಇಂದು ಪ್ರತೀ ಜಿಲ್ಲೆಗೊಂದು ವಿವಿ-ಮೆಡಿಕಲ್ ಕಾಲೇಜುಗಳಿವೆ. ಅದನ್ನು ಮತ್ತಷ್ಟು ಉಜ್ವಲಮಟ್ಟಕ್ಕೆ ಒಯ್ದು ಎಲ್ಲರನ್ನು ಸುಶಿಕ್ಷಿತರು, ಉದ್ಯೋಗಸ್ಥರು, ಸಪ್ರಜೆಗಳನ್ನಾಗಿ ರೂಪಿಸಿ ಸದೃಢ ಭಾರತ ನಿರ್ಮಿಸಬೇಕಿದೆ. ಈ ನಿಟ್ಟಿನಲ್ಲಿ ಕಠಿಣ ಹಾದಿ ಕ್ರಮಿಸಲು ಪಣತೊಡಬೇಕಿದೆ ಎಂದು ಹೇಳಿದರು.
    ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಡಿ ವರ್ಷವಿಡೀ ಸರಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈಸೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಉನ್ನತ ಶಿಕ್ಷಣ ಪರಿಷತ್ ಕುವೆಂಪು ವಿವಿಗೆ ಜವಾಬ್ದಾರಿ ವಹಿಸಿದೆ ಎಂದರು.
    ಯೋಧರಾದ ವೀರಸ್ವಾಮಿ, ರಾಜಶೇಖರ್, ಎಂ.ದಯಾನಂದ್, ಶಿವಾನಂದ ಮೂರ್ತಿ, ದೇವಸಗಾಯಂ ಅವರನ್ನು ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು.
    ವಿವಿ ಕುಲಸಚಿವೆ ಜಿ.ಅನುರಾಧಾ, ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಎಂ.ತ್ಯಾಗರಾಜ್, ಹಣಕಾಸು ಅಧಿಕಾರಿ ಎಚ್.ರಾಮಕೃಷ್ಣ, ಡಾ. ವೀರೂಪಾಕ್ಷ, ಡಾ. ಪರಿಸರ ನಾಗರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts