ಕುವೈತ್‌ನಲ್ಲಿ ಸಂಕಷ್ಟದಲ್ಲಿರುವ ಮಂಗಳೂರಿನ ಯುವಕರಿಗೆ ತವರಿಗೆ ಮರಳಲು ಸಕಲ ವ್ಯವಸ್ಥೆ

Latest News

ಸುಳ್ಯ-ನಾರ್ಕೋಡು-ಕೋಲ್ಚಾರ್-ಬಂದಡ್ಕ ಅಂತಾರಾಜ್ಯ ರಸ್ತೆ ಅಭಿವೃದ್ಧಿಗೆ ಅನುದಾನ

ಗಂಗಾಧರ ಕಲ್ಲಪಳ್ಳಿ ಸುಳ್ಯಒಟ್ಟು 12.16 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ತಿಗೊಂಡಿದ್ದು, ಮಳೆ ನಿಂತ ಕೂಡಲೇ ಕೆಲಸ ಆರಂಭವಾಗಲಿದೆ....

ಮನೆ ಅಂಗಳದಲ್ಲಿಯೇ ಭತ್ತ ಬೆಳೆ

ಪುರುಷೋತ್ತಮ ಭಟ್ ಪೆರ್ಲಯುವಜನರಿಗೆ ಕೃಷಿ ಆಸಕ್ತಿ ಕುಸಿಯುತ್ತಿದೆ ಎಂಬ ಭೀತಿಯ ಮಧ್ಯೆ ಹಲವು ಸಾಧನಾಶೀಲರು ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗ ಮೂಲಕ ಭರವಸೆ...

ಅಧಿಕಾರಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೊಡಿಸಿ

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಜಿಲ್ಲೆಯ ಕೆಎಎಸ್ ಮತ್ತು ಐಎಎಸ್ ಅಧಿಕಾರಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ...

ಕಟೀಲು ಮೇಳಗಳ ತಿರುಗಾಟಕ್ಕೆ ಚಾಲನೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ 2019-20ನೇ ಸಾಲಿನ ತಿರುಗಾಟಕ್ಕೆ ದೇವಳದ ಗರ್ಭಗುಡಿ ಮುಂದೆ ಕಲಾವಿದರಿಗೆ ಅರ್ಚಕ...

ಕಲ್ಕಾರಿನಲ್ಲಿ ಕುಸಿದ ಮೋರಿ

ಹರಿಪ್ರಸಾದ್ ನಂದಳಿಕೆ, ಬೆಳ್ಮಣ್.ಕಾರ್ಕಳ ಪಳ್ಳಿ ರಾಜ್ಯ ಹೆದ್ದಾರಿಯಲ್ಲಿ ಪಳ್ಳಿ ಗ್ರಾಪಂ ವ್ಯಾಪ್ತಿಯ ಕಲ್ಕಾರ್ ಸೇತುವೆ ಸಮೀಪ ಮೋರಿ ಕುಸಿದು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು...

ವಿಜಯವಾಣಿ ಸುದ್ದಿಜಾಲ ಮಂಗಳೂರು
ಉದ್ಯೋಗ ಅರಸಿ ಕುವೈತ್‌ಗೆ ತೆರಳಿ ತೊಂದರೆಯಲ್ಲಿ ಸಿಲುಕಿರುವ ಮಂಗಳೂರಿನ 35 ಯುವಕರು ಸುರಕ್ಷಿತವಾಗಿ ತಾಯ್ನಡಿಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಸಮಸ್ಯೆ ಬಗ್ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಚಿವಾಲಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ. ಪರಿಸ್ಥಿತಿ ನಿಭಾಯಿಸುವ ಜವಾಬ್ದಾರಿಯನ್ನು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅವರಿಗೆ ವಹಿಸಲಾಗಿದೆ.

ಸಂಸದ ನಳಿನ್ ಅವರು ಸುಷ್ಮಾ ಸ್ವರಾಜ್ ಅವರಿಗೂ ಸಮಸ್ಯೆ ಕುರಿತು ವಿವರಣೆ ನೀಡಿದ್ದು, ಅಗತ್ಯ ನೆರವು ಒದಗಿಸುವ ಬಗ್ಗೆ ಅವರಿಂದ ಭರವಸೆ ದೊರೆತಿದೆ.

ಅನಿವಾಸಿ ಕನ್ನಡಿಗರಿಂದ ಸಹಾಯಹಸ್ತ: ಕುವೈತ್‌ನಿಂದ ಸಹಾಯ ಕೋರಿ ಮಂಗಳೂರಿನ ಯುವಕರು ಮೂರು ದಿನ ಹಿಂದೆ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರಿಗೆ ಕಳುಹಿಸಿದ ವಾಟ್ಸಪ್‌ವಿಡಿಯೋ ವೈರಲ್ ಆದ ಕೂಡಲೇ ಸ್ವದೇಶ ಹಾಗೂ ಅನಿವಾಸಿ ಕನ್ನಡಿಗರಿಂದ ಚಾಚಿದ ಸಹಾಯ ಹಸ್ತ ಸಂತ್ರಸ್ತರಲ್ಲಿ ಸಮಾಧಾನ ತಂದಿದೆ. ಊರಿಗೆ ಮರಳುವ ಕುರಿತು ವಿಶ್ವಾಸ ತಂದಿದೆ.
ಮಂಗಳೂರು ಯುವಕರು ಪಟ್ಟ ಪಾಡಿನ ಬಗ್ಗೆ ಭಾರತೀಯ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಸ್ಥಳೀಯ ಭಾಷೆಗೆ ತರ್ಜುಮೆಗೊಂಡು ಕುವೈತ್ ರಾಯಭಾರಿ ಕಚೇರಿ ತಲುಪಿದ್ದು, ಸ್ಥಳೀಯ ಸರ್ಕಾರದ ಗಮನಕ್ಕೆ ಬಂದಿರುವ ಬಗ್ಗೆ ರಾಯಭಾರಿ ಕಚೇರಿ ಮೂಲ ತಿಳಿಸಿರುವ ಬಗ್ಗೆ ಅನಿವಾಸಿ ಭಾರತೀಯರೊಬ್ಬರು ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ತಕ್ಷಣ ಸ್ಪಂದಿಸಿದ ಉದ್ಯಮಿ: ಅನಿವಾಸಿ ಭಾರತೀಯರ ಮನವಿಗೆ ತಕ್ಷಣ ಸ್ಪಂದನೆ ನೀಡಿರುವ ನವದೆಹಲಿ ಮೂಲದ ಉದ್ಯಮಿ ಆಕಾಶ್ ಎಸ್.ಪನ್ವಾರ್ ಅವರು ತೊಂದರೆಯಲ್ಲಿ ಸಿಲುಕಿರುವ ಮಂಗಳೂರಿನ 35 ಸಹಿತ ಭಾರತದ 75 ಜನರು ಸ್ವದೇಶಕ್ಕೆ ಮರಳಲು ಅಗತ್ಯ ಟಿಕೆಟ್ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಭರವಸೆ ನೀಡಿದ್ದಾರೆ.

ವಂಚಿಸಿದ ಕಂಪನಿಯಿಂದಲೂ ಸಹಕಾರ: ಉದ್ಯೋಗ ವಂಚಿಸಿದ ಕಂಪನಿಯೂ ರಾಯಭಾರಿ ಕಚೇರಿಯಿಂದ ಸ್ವದೇಶಕ್ಕೆ ಮರಳಲು ಅನುಮತಿ ಒದಗಿಸಲು ಸಂಬಂಧಿಸಿದ ಜಿ.ಪಿ(ಗವರ‌್ನಮೆಂಟ್ ಪ್ರಾಜೆಕ್ಟ್) ಲೆಟರ್ ಒದಗಿಸಿದರೆ ಪೂರಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ. ಇದಕ್ಕೂ ಮೊದಲು ರಾಜೀನಾಮೆ ಪತ್ರ ಒದಗಿಸಿದರೆ ಮಾತ್ರ ಸ್ವದೇಶಕ್ಕೆ ಮರಳಲು ವ್ಯವಸ್ಥೆ ಮಾಡುವುದಾಗಿ ಕಂಪನಿ ತಿಳಿಸಿತ್ತು. ಆದರೆ ಹಿತೈಷಿಗಳ ಸಲಹೆಯಂತೆ ಯುವಕರು ರಾಜೀನಾಮೆ ಪತ್ರ ನೀಡಿಲ್ಲ.

ಮಂಗಳೂರು ಯುವಕರಿಗೆ ಜಿ.ಪಿ.ಲೆಟರ್ ಪಡೆಯಲು ನೆರವು ಒದಗಿಸುವ ಕುರಿತು ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್‌ ಕುವೈತ್ ಪದಾಧಿಕಾರಿಗಳು ಭರವಸೆ ನೀಡಿದ್ದಾರೆ. ಸಮಸ್ಯೆ ಬಗ್ಗೆ ಸೋಮವಾರ ಸಾಯಂಕಾಲ ಸಂಸ್ಥೆಯ ಪದಾಧಿಕಾರಿಗಳ ಗಮನಕ್ಕೆ ತಂದಾಗ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅನಿವಾಸಿ ಕನ್ನಡಿಗ ಮೋಹನ್‌ದಾಸ್ ಕಾಮತ್ ತಿಳಿಸಿದ್ದಾರೆ.
ಸಂಕಷ್ಟಕ್ಕೆ ಸಿಲುಕಿರುವವರಿಗೆ ಸದ್ಯ ಊಟ, ವಸತಿ ವ್ಯವಸ್ಥೆ ಕೈಗೊಳ್ಳಲಾಗಿದ್ದು ಶೀಘ್ರದಲ್ಲೇ ಅವರು ಊರಿಗೆ ಮರಳುವ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕುವೈತ್‌ನಲ್ಲಿ ಯುವಕರ ಸಮಸ್ಯೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮಾಹಿತಿ ನೀಡಿದ್ದರು. ಅವರಿಂದ ತಕ್ಷಣ ವಿವರ ಕಳುಹಿಸುವಂತೆ ತಿಳಿಸಿದ್ದೆ. ವಿವರ ದೊರೆತ ತಕ್ಷಣ ವಿದೇಶಾಂಗ ಇಲಾಖೆ ಕಾರ್ಯದರ್ಶಿಯವರ ಗಮನಕ್ಕೆ ತಂದು ಆವಶ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ.
ಡಿ.ವಿ.ಸದಾನಂದ ಗೌಡ, ಮಾಜಿ ಕೇಂದ್ರ ಸಚಿವ

- Advertisement -

Stay connected

278,675FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...