22.5 C
Bengaluru
Sunday, January 19, 2020

ಕುವೈತ್‌ನಲ್ಲಿ ಸಂಕಷ್ಟದಲ್ಲಿರುವ ಯುವಕರ ರಕ್ಷಣೆ ಕುರಿತು ಇಂದು ನಿರ್ಧಾರ ಸಾಧ್ಯತೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ವಿಜಯವಾಣಿ ಸುದ್ದಿಜಾಲ ಮಂಗಳೂರು

ಉದ್ಯೋಗ ಅರಸಿ ಕುವೈತ್‌ಗೆ ತೆರಳಿ ವಂಚನೆಗೊಳಗಾಗಿದ್ದ 35 ಮಂದಿ ಮಂಗಳೂರಿನ ಯುವಕರ ಸಹಿತ 75 ಮಂದಿ ಭಾರತೀಯರನ್ನು ತಾಯ್ನೆಲಕ್ಕೆ ಕರೆತರುವ ಕುರಿತು ಇಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಕುವೈತ್‌ನಲ್ಲಿ ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಸರ್ಕಾರಿ ಸ್ವಾಮ್ಯದ ಶೋನ್(ನ್ಯಾಯಾಲಯ ಮಾದರಿ ಸಂಸ್ಥೆ) ಗುರುವಾರ ಮಧ್ಯಾಹ್ನ 1 ಗಂಟೆಗೆ ಸಮಯ ನಿಗದಿಪಡಿಸಿ, ವಂಚನೆಗೊಳಗಾದ ಯುವಕರನ್ನು, ಉದ್ಯೋಗ ನೀಡಿ ವಂಚಿಸಿದ ಸಂಸ್ಥೆಯ ಮುಖ್ಯಸ್ಥರನ್ನು ಆಹ್ವಾನಿಸಿದೆ. ಜತೆಗೆ ಭಾರತೀಯ ರಾಯಭಾರಿ ಕಚೇರಿಯ ಉಪ ಕಾರ್ಯದರ್ಶಿ ಶಿಬಿ ಯು.ಎಸ್ ಹಾಗೂ ಯುವಕರ ಬಿಡುಗಡೆಗೆ ಪ್ರಯತ್ನಿಸುತ್ತಿರುವ ಇಂಜಿನಿಯರ್ಸ್‌ ಘಟಕದ ಪದಾಧಿಕಾರಿ ಮೋಹನ್‌ದಾಸ್ ಕಾಮತ್ ತೆರಳಲಿದ್ದಾರೆ. ಅಲ್ಲಿ ನಡೆಯುವ ವಿಚಾರಣೆಯನ್ನು ಅನುಸರಿಸಿ ಕುವೈತ್‌ನ ಪಬ್ಲಿಕ್ ಅಥಾರಿಟಿ ಆಫ್ ಮ್ಯಾನ್ ಪವರ್ (ಪ್ಯಾಮ್)ತನ್ನ ನಿರ್ಧಾರ ಪ್ರಕಟಿಸಲಿದೆ.

ಒಂದು ವೇಳೆ ಪ್ಯಾಮ್ ತನ್ನ ನಿರ್ಧಾರ ಪ್ರಕಟಿಸುವಲ್ಲಿ ವಿಳಂಬವಾದರೆ ಯುವಕರು ಇನ್ನೊಂದು ವಾರ ಕಾಯಲೇಬೇಕು. ಕಾರಣ ಶುಕ್ರವಾರ ಕುವೈತ್‌ನಲ್ಲಿ ರಜೆ, ಮಂಗಳವಾರದಿಂದ ರಮಜಾನ್ ಹಬ್ಬದ ಹಿನ್ನೆಲೆಯಲ್ಲಿ 5 ದಿನ ಸರ್ಕಾರಿ ರಜೆ ಘೋಷಣೆಯಾಗಿದೆ. ಆದ್ದರಿಂದ ಮತ್ತೆ ಕಚೇರಿಗಳು ತೆರೆಯುವವರೆಗೆ ಕಾಯಬೇಕು

ಟಿಕೆಟ್ ವ್ಯವಸ್ಥೆಗೆ ಆಗ್ರಹ:  ಯುವಕರಿಗೆ ಉದ್ಯೋಗ ಒದಗಿಸುವುದಾಗಿ ನಂಬಿಸಿ 65ಸಾವಿರ ರೂ. ಪಡೆದು ವಂಚಿಸಿದ ಸಂಸ್ಥೆಯೇ ಯುವಕರಿಗೆ ಭಾರತಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಬೇಕು ಎಂದು ಭಾರತೀಯ ರಾಯಭಾರಿ ಕಚೇರಿ ಹೇಳಿದೆ ಎಂದು ತಿಳಿಸಿರುವ ಮೋಹನ್‌ದಾಸ್ ಕಾಮತ್, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಈ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ರಾಜೀನಾಮೆ ಪತ್ರಕ್ಕೆ ಸಹಿ ಹಾಕಿಸಲು ಯತ್ನ:  ಬುಧವಾರ ನಡೆದ ಪ್ರಮುಖ ಬೆಳವಣಿಗೆಯಲ್ಲಿ ಉದ್ಯೋಗ ವಂಚಿಸಿದ ಸಂಸ್ಥೆ ಒಟ್ಟು 75 ಮಂದಿ ಸಂತ್ರಸ್ತ ಯುವಕರ ಪೈಕಿ 40 ಯುವಕರನ್ನು ಕಂಪೆನಿಗೆ ಕರೆದುಕೊಂಡು ಹೋಗಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿಸಲು ಯತ್ನಿಸಿದೆ. ಆದರೆ ಯುವಕರು ಅರಬ್ಬಿ ಭಾಷೆಯಲ್ಲಿದ್ದ ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ. ಇದಕ್ಕೆ ಅಬೂಬಕ್ಕರ್ ಸಿದ್ದಿಕ್ ಎನ್ನುವ ಯುವಕನ್ನು ಕೋಣೆಯಲ್ಲಿ ಬಂಧಿಸಿ ಹೆದರಿಸಲು ಯತ್ನಿಸಿದೆ. ಇದು ರಾಯಭಾರಿ ಕಚೇರಿಯ ಗಮನಕ್ಕೆ ಬಂದ ತಕ್ಷಣ ಅವರನ್ನು ಕಳುಹಿಸಿದ್ದಾರೆ. ಉಳಿದ 35 ಮಂದಿ ಶೋನ್‌ನಲ್ಲಿ ದೂರು ದಾಖಲಿಸಿದ್ದಾರೆ.

ಕುವೈತ್‌ನಲ್ಲಿ ಉದ್ಯೋಗ ಒದಗಿಸುವುದಾಗಿ ಹೇಳುವ 18 ಭಾರತೀಯ ಮೂಲದ ನೇಮಕಾತಿ ಸಂಸ್ಥೆಗಳ ಕುರಿತು ಜಾಗರೂಕರಾಗಿರುವಂತೆ ಕುವೈತ್‌ನ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಈ ಕುರಿತು ತನ್ನ ವೆಬ್‌ಸೈಟ್ ಈ ಕುರಿತಂತೆ ಪ್ರಕಟಿಸಿರುವ ರಾಯಭಾರಿ ಕಚೇರಿ ಕುವೈತ್‌ನ 90 ಕಂಪೆನಿ ಹೆಸರನ್ನು ಉಲ್ಲೇಖಿಸಿ ಉದ್ಯೋಗಾಕಾಂಕ್ಷಿಗಳು, ಈ ಸಂಸ್ಥೆಗಳಿಂದ ದೂರವಿರಬೇಕು ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕುವೈತ್‌ನ ಭಾರತೀಯ ರಾಯಭಾರಿ ಕಚೇರಿ ವೆಬ್‌ಸೈಟ್ ಡಿಡಿಡಿ.ಜ್ಞಿಛಿಞಚಿಡಿಠಿ.ಜಟ.ಜ್ಞಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ನಮಗೆ ಸಂಬಂಧವಿಲ್ಲ ಎಂದ ಸಂಸ್ಥೆ: ಮಾಣಿಕ್ಯ ಅಸೋಸಿಯೇಟ್ಸ್ ಮ್ಯಾನ್‌ಪವರ್ ಕನ್ಸಲ್ಟೆನ್ಸಿ ಸಂಸ್ಥೆಗೂ ಕುವೈತ್‌ನಲ್ಲಿ ನಡೆದ ಘಟನೆಗೂ ಯಾವುದೇ ಸಂಬಂಧವಿಲ್ಲ. ಆದರೂ ಸಂತ್ರಸ್ತ 35 ಯುವಕರನ್ನು ಭಾರತಕ್ಕೆ ಕರೆತರಲು ಸಹಾಯ ಮಾಡಲು ಸಿದ್ಧವಿದೆ. ಸಂಸ್ಥೆ 58 ಜನರಿಗೆ ಉದ್ಯೋಗ ನಿಮಿತ್ತ ಮುಂಬೈನ ಹಾಕ್ ಕನ್ಸಲ್‌ಟೆನ್ಸಿ ಪ್ರೈವೆಟ್ ಲಿಮಿಟೆಡ್‌ಗೆ ಕಳುಹಿಸಿಕೊಟ್ಟಿದೆ. ಅವರು ಕುವೈತ್‌ನ ಆಸ್ಪೆಕ್ಟ್ ಪೆಟ್ರೋಲಿಯಂ ಸರ್ವೀಸಸ್ ಕಂಪನಿಯಲ್ಲಿ ಉದ್ಯೋಗದ ವ್ಯವಸ್ಥೆ ಮಾಡಿದೆ. ಇದು ಅಭ್ಯರ್ಥಿಗಳಿಗೂ ಗೊತ್ತು. ಮಾಣಿಕ್ಯ ಅಸೋಸಿಯೇಟ್ಸ್ ಹಾಕ್ ಕನ್ಸಲ್‌ಟೆನ್ಸಿ ಪ್ರೈವೆಟ್ ಲಿಮಿಟೆಡ್‌ಗೆ ಅಭ್ಯರ್ಥಿಗಳನ್ನು ಕಳುಹಿಸುವ ಕೊಂಡಿಯಾಗಿ ಕೆಲಸ ಮಾಡುತ್ತಿದೆ. ಆದ್ದರಿಂದ ಸಂಸ್ಥೆಗೂ ಘಟನೆಗೂ ಸಂಬಂಧವಿಲ್ಲ ಎಂದು ಮುಖ್ಯಸ್ಥ ಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...