21.7 C
Bengaluru
Tuesday, January 21, 2020

53 ಕುವೈತ್ ಸಂತ್ರಸ್ತರ ಪ್ರಕರಣ ಇತ್ಯರ್ಥ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ವಿಜಯವಾಣಿ ಸುದ್ದಿಜಾಲ ಮಂಗಳೂರು

ಕುವೈತ್‌ನ ಶೋನ್(ನ್ಯಾಯಾಲಯ ಮಾದರಿ ಸರ್ಕಾರಿ ಸ್ವಾಮ್ಯದ ಸಂಸ್ಥೆ)ನಲ್ಲಿ ಭಾನುವಾರ ಸಾಯಂಕಾಲ ಜರುಗಿದ ಮಹತ್ವದ ಸಭೆಯಲ್ಲಿ 53 ಭಾರತೀಯ ಸಂತ್ರಸ್ತರ ಪ್ರಕರಣ ಇತ್ಯರ್ಥಗೊಂಡಿದೆ. ಯಾವ ರೀತಿ ಇತ್ಯರ್ಥಗೊಂಡಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಾಗಿದೆ.

ಅರೇಬಿಕ್ ಭಾಷೆಯಲ್ಲಿದ್ದ ಇತ್ಯರ್ಥ ಪತ್ರಕ್ಕೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಹಾಗೂ ಅವರ ನಿರ್ದೇಶನದಂತೆ ಸಂತ್ರಸ್ತರು ಸಹಿ ಹಾಕಿದ್ದಾರೆ. ಸೋಮವಾರ ಮತ್ತೆ ಸಭೆ ಮುಂದುವರಿಯಲಿದ್ದು, ಉಳಿದ 22 ಮಂದಿ ಸಂತ್ರಸ್ತರ ವಿಷಯ ಸಂಬಂಧಿಸಿ ನಿರ್ಣಯ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಅನಿವಾಸಿ ಕನ್ನಡಿಗರ ಸಂಘಟನೆ ಮೂಲ ತಿಳಿಸಿದೆ.

ಕುವೈತ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಉಪ ಕಾರ್ಯದರ್ಶಿ ಶಿಬಿ ಯು.ಎಸ್., ಶೋನ್, ಪಬ್ಲಿಕ್ ಅಥಾರಿಟಿ ಆಫ್ ಮ್ಯಾನ್‌ಪವರ್(ಪ್ಯಾಮ್), ಇನೆಸ್ಕೋ ಜನರಲ್ ಟ್ರೇಡಿಂಗ್ ಆ್ಯಂಡ್ ಕಾಂಟ್ರಾಕ್ಟ್ ಕಂಪನಿ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

15 ಮಂದಿ ಗೈರು:  ಪೂರ್ವ ನಿಗದಿಯಂತೆ ಭಾನುವಾರ ನಡೆದ ಸಭೆಯಲ್ಲಿ ಎಲ್ಲ 75 ಭಾರತೀಯ ಸಂತ್ರಸ್ತರು ಭಾಗವಹಿಸಬೇಕಾಗಿತ್ತು. ಆದರೆ ಇದರಲ್ಲಿ 15 ಮಂದಿ ಕಂಪನಿ ಸೊತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ಹಸ್ತಾಂತರಿಸಿಲ್ಲ ಎನ್ನುವ ಕಾರಣ ನೀಡಿ ಅವರು ಸಭೆಯಲ್ಲಿ ಭಾಗವಹಿಸಲು ಉದ್ಯೋಗ ನೀಡಿದ್ದ ಸಂಸ್ಥೆ ಅವಕಾಶ ನೀಡಿಲ್ಲ. ಆ ನೌಕರರು ಕಂಪನಿಯ ಮೊಬೈಲ್, ಬೈಕ್ ಮುಂತಾದ ವಸ್ತುಗಳಲ್ಲಿ ಕೆಲವನ್ನು ಹಸ್ತಾಂತರಿಸಿಲ್ಲ ಎಂದು ಕಂಪೆನಿ ತಗಾದೆ ತೆಗೆದಿದೆ ಎಂದು ಆಕ್ಷೇಪಿಸಲಾಗಿದೆ. ಶುಕ್ರವಾರ ಹಾಗೂ ಶನಿವಾರ ಕಂಪೆನಿಗೆ ರಜೆ ಇದ್ದ ಕಾರಣ ಕೆಲವರಿಗೆ ತಮ್ಮ ವಶದಲ್ಲಿದ್ದ ವಸ್ತುಗಳನ್ನು ಹಸ್ತಾಂತರಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

7 ಮಂದಿ ರಾಜೀನಾಮೆ: ಸಭೆಯಲ್ಲಿ ಭಾಗವಹಿಸಿದವರ ಪೈಕಿ ತೆಲಂಗಾಣದ ಏಳು ಮಂದಿ ಕಂಪನಿಯವರ ಸಲಹೆಯಂತೆ ಈಗಾಗಲೇ ರಾಜೀನಾಮೆ ನೀಡಿದ ಕಾರಣ ಅವರ ವಿಷಯ ಶೋನ್‌ನಲ್ಲಿ ಇತ್ಯರ್ಥಪಡಿಸುವ ಪ್ರಮೇಯ ಉಂಟಾಗಿಲ್ಲ.

ಶೋನ್‌ನಲ್ಲಿಯೇ ವೇತನ ಹಸ್ತಾಂತರ: ಉದ್ಯೋಗ ಒದಗಿಸಿದ್ದ ಕಂಪನಿಯು ಸಂತ್ರಸ್ತ ನೌಕರರಿಗೆ ನೀಡಬೇಕಾದ ಬಾಕಿ ವೇತನವನ್ನು ಭಾರತೀಯ ರಾಯಭಾರಿ ಕಚೇರಿಯಲ್ಲಿ ಒದಗಿಸುವ ಭರವಸೆ ನೀಡಿದ್ದರೂ, ರಾಯಭಾರಿ ಅಧಿಕಾರಿಗಳು ಇದಕ್ಕೆ ಒಪ್ಪಿಲ್ಲ. ಸಂಧಾನ ನಡೆಯುತ್ತಿರುವ ಶೋನ್‌ನಲ್ಲಿಯೇ ಹಣ, ಪಾಸ್‌ಪೋರ್ಟ್ ಮತ್ತು ಇತರ ದಾಖಲೆಗಳನ್ನು ಹಸ್ತಾಂತರಿಸಬೇಕು ಎಂದು ರಾಯಭಾರಿ ಕಚೇರಿ ಅಧಿಕಾರಿ ತಾಕೀತು ಮಾಡಿದೆ. ಎಲ್ಲ ನೌಕರರ ಪ್ರಕರಣ ಸೋಮವಾರ ಇತ್ಯರ್ಥಗೊಂಡರೆ ಪ್ರಯಾಣ ಟಿಕೆಟ್ ವ್ಯವಸ್ಥೆ ಮಾತ್ರ ಬಾಕಿ ಉಳಿಯಲಿದೆ.

ಕಾನೂನು ಹೋರಾಟಕ್ಕೆ ಅವಕಾಶ
ಸಂತ್ರಸ್ತರು ಕಾನೂನು ಹೋರಾಟ ನಡೆಸುವುದಿದ್ದರೆ ಪೂರ್ಣ ಸಹಕಾರ ನೀಡಲಾಗುವುದು ಎಂದು ಶೋನ್‌ನ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಆದರೆ ಇದು ಪ್ರಾಯೋಗಿಕವಾಗಿ ಕಠಿಣ. ಕಾನೂನು ಹೋರಾಟ ಮುಂದುವರಿಸಿದರೆ ಮತ್ತೆ ಕೆಲವು ತಿಂಗಳು ಕುವೈತ್‌ನಲ್ಲಿಯೇ ಉಳಿಯಬೇಕು. ಇರುವ ದಾಖಲೆಗಳು ನಮಗೆ ಪೂರಕವಾಗಿ ಇರಬೇಕು. ಆದ್ದರಿಂದ ಸಿಗುವಷ್ಟು ಸೌಲಭ್ಯ ಪಡೆದುಕೊಂಡು ಸ್ವದೇಶಕ್ಕೆ ಮರಳುವುದು. ಸಾಧ್ಯವಾದರೆ ಸ್ವದೇಶಕ್ಕೆ ಮರಳಿದ ಬಳಿಕ ಕಾನೂನು ಹೋರಾಟ ನಡೆಸಬಹುದು. ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಕೋರಿಕೆಗಳು ಬಂದರೆ ಅಗತ್ಯ ದಾಖಲೆ, ಮಾಹಿತಿ ಒದಗಿಸಲಾಗುವುದು ಎಂದು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಂತ್ರಸ್ತರಿಗೆ ಭರವಸೆ ನೀಡಿದ್ದಾರೆ ಎಂದು ಮೂಲ ತಿಳಿಸಿದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...