More

    ಆರ್ಥಿಕತೆ ಹಳಿಗೆ ತರಲು ಕಾಮತ್​ಗೆ ಸಚಿವ ಸ್ಥಾನ?

    ನವದೆಹಲಿ: ದೇಶದ ಆರ್ಥಿಕ ಪರಿಸ್ಥಿತಿ ಮರಳಿ ಹಳಿಗೆ ತರುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆರ್ಥಿಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ದಿಗ್ಗಜರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ.

    ಬ್ರಿಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ವಿ.ಕಾಮತ್ ಶೀಘ್ರದಲ್ಲೇ ಹಣಕಾಸು ಸಚಿವಾಲಯದ ರಾಜ್ಯ ಸಚಿವರಾಗಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ಹೇಳಿವೆ.

    ಕಾಮತ್ ಜತೆಗೆ ರಾಜ್ಯಸಭಾ ಸದಸ್ಯ ಸ್ವಪನ್ ದಾಸ್​ಗುಪ್ತಾ ಮತ್ತು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಕೂಡ ಕೇಂದ್ರ ಮಂತ್ರಿ ಮಂಡಲ ಸೇರಲಿದ್ದಾರೆ ಎನ್ನಲಾಗಿದೆ.

    ಅಲ್ಲದೇ ಮಾಜಿ ಸಚಿವ ಸುರೇಶ್ ಪ್ರಭುರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯೂ ಇದೆ. ಬ್ರಿಕ್ಸ್ ಬ್ಯಾಕ್ ಅಧ್ಯಕ್ಷರಾಗುವುದಕ್ಕೂ ಮೊದಲು ಕೆ.ವಿ. ಕಾಮತ್ ಇನ್ಪೋಸಿಸ್ ಅಧ್ಯಕ್ಷರಾಗಿ ಮತ್ತು ಐಸಿಐಸಿಐ ಬ್ಯಾಂಕ್​ನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts