More

    ಕರ್ನಾಟಕದ ಸಂಪತ್ತಿನ ಸದುಪಯೋಗ ಅಗತ್ಯ

    ಧಾರವಾಡ: ಕರ್ನಾಟಕ ಭೂ, ಖನೀಜ ಹಾಗೂ ಜಲ ಸಂಪತ್ತಿನ ಕಣಜ. ಇದರ ಸದುಪಯೋಗವಾಗಬೇಕು. ಉತ್ತರ ಕರ್ನಾಟಕದ ಜನ ನಿಷ್ಠಾವಂತರು ಮತ್ತು ಪರಿಶ್ರಮಿಗಳು. ನಮ್ಮನ್ನು ನಾವು ವಂಚಿಸದೆ, ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿಶ್ರಾಂತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಹೇಳಿದರು.
    ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗುರುವಾರ ಆಯೋಜಿಸಿದ್ದ ಸಂಘದ ೧೩೪ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ವಿಮರ್ಶಕ ಡಾ. ಕೃಷ್ಣ ಕೊಲ್ಹಾರಕುಲಕರ್ಣಿ ಮಾತನಾಡಿ, ಕನ್ನಡದ ಅಸ್ಮಿತೆಯ ಪ್ರತೀಕವಾದ ಸಂಘಕ್ಕೆ ಡಾ. ಪಾಟೀಲ ಪುಟ್ಟಪ್ಪ ಅವರಂಥ ಮುಂದಾಳತ್ವ ಅಗತ್ಯ ಎಂದರು.
    ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಚಂದ್ರಕಾAತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಶಂಕರ ಹಲಗತ್ತಿ, ಪ್ರೊ. ಮಾಲತಿ ಪಟ್ಟಣಶೆಟ್ಟಿ, ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಗುರು ಹಿರೇಮಠ, ಇತರರಿದ್ದರು. ಶಂಕರ ಹಲಗತ್ತಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts