More

    ಮುಂದಿನ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಖಚಿತ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಹೇಳಿಕೆ

    ಮದ್ದೂರು: ನಾಗಮಂಗಲ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಸ್ಪಷ್ಟಪಡಿಸಿದರು.
    ತಾಲೂಕಿನ ಗುಡಿದೊಡ್ಡಿ ಗ್ರಾಮದಲ್ಲಿ ಆಯೋಜಿಸಿದ್ದ ಬೀರೇಶ್ವರ ಚನ್ನಕೇಶ್ವರಸ್ವಾಮಿ ದೇವರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರೂ ಪಕ್ಷಗಳಿಂದ ಆಹ್ವಾನವಿದೆ. ಚುನಾವಣಾ ಕಾಲಕ್ಕೆ ಪಕ್ಷೇತರ ಅಥವಾ ಯಾವುದೇ ಪಕ್ಷದಿಂದ ಸ್ಪರ್ಧಿಸುವ ಸಂಬಂಧ ನನ್ನ ಹಿತೈಷಿಗಳ ಹಾಗೂ ಬೆಂಬಲಿಗರ ಸಭೆ ನಡೆಸಿ ಅವರಿಂದ ಸಲಹೆ ಪಡೆದು ಅಂತಿಮ ತಿರ್ಮಾನ ಕೈಗೊಳ್ಳುತ್ತೇನೆ ಎಂದರು.
    ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಚಲುವರಾಯಸ್ವಾಮಿ, ಸುರೇಶ್‌ಗೌಡ ಅವರ ಆಡಳಿತ ನೋಡಿದ್ದಾರೆ. ನಮಗೂ ಒಂದು ಅವಕಾಶವನ್ನು ಈ ಬಾರಿ ಕ್ಷೇತ್ರದ ಜನರು ನೀಡಲಿದ್ದಾರೆ. ಚುನಾವಣೆ ಒಂದೇ ರೀತಿ ಇರುವುದಿಲ್ಲ. ಚಲುವರಾಯಸ್ವಾಮಿ ಅವರನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ 47 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಶಾಸಕ ಸುರೇಶ್‌ಗೌಡ ಅವರು 60 ಸಾವಿರ ಮತಗಳ ಅಂತರದಿಂದ ಪರಾಭವಗೊಂಡರೂ ಅಚ್ಚರಿಪಡುವಂತಿಲ್ಲ ಎಂದರು.
    ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ 6-7 ತಿಂಗಳಿಂದ ಸಮಾಜ ಸೇವಕರು ಸಮಾಜ ಸೇವೆ ಹೆಸರಿನಲ್ಲಿ ರಾಜಕೀಯಕ್ಕೆ ಧುಮುಕಲು ಸಜ್ಜಾಗುವ ಮೂಲಕ ಜನರ ಸೇವೆ ಮಾಡುತ್ತಿದ್ದಾರೆ. ಉಳ್ಳವರು ಜನ ಸೇವೆ ಮಾಡುವುದರಲ್ಲಿ ತಪ್ಪೇನಿಲ್ಲ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಸಮಾಜ ಸೇವಕರು ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts