More

    ಕೂಲಿಕಾರರಿಗೆ ಖಾತ್ರಿ ಯೋಜನೆಯಡಿ ಉದ್ಯೋಗ ಕೊಡುವಂತೆ ಶಾಸಕ ಡಿ.ಎಸ್.ಹೂಲಗೇರಿ ತಾಕೀತು

    ಲಿಂಗಸುಗೂರು: ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್-19 ನಿಗ್ರಹ ಮತ್ತು ಸ್ವಚ್ಛತೆ, ಕುಡಿವ ನೀರು ಪೂರೈಕೆ, ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಸಮರ್ಪಕವಾಗಿ ನಿಭಾಯಿಸಬೇಕೆಂದು ಶಾಸಕ ಡಿ.ಎಸ್.ಹೂಲಗೇರಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

    ಸ್ಥಳೀಯ ತಾಪಂ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕರೊನಾ ಮಹಾಮಾರಿ ಹರಡದಂತೆ ವೈದ್ಯರು, ಆಶಾ, ಅಂನಗವಾಡಿ ನೌಕರರು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಗ್ರಾಮೀಣ ಹಳ್ಳಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

    ಬಹುತೇಕ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಪಿಡಿಒಗಳು ಸ್ವಚ್ಛತೆಗೆ ಗಮನ ಹರಿಸದ ಕಾರಣ ಚರಂಡಿ ಹೂಳು ತುಂಬಿ ರಸ್ತೆ ಮೇಲೆ ಕಲುಷಿತ ನೀರು ಸಂಗ್ರಹವಾಗಿದೆ. ರಸ್ತೆ ಬದಿಗಳಲ್ಲಿ ತಿಪ್ಪೆಗುಂಡಿಗಳು ಹಾಕಿದ್ದರಿಂದ ತ್ಯಾಜ್ಯ ವಸ್ತುಗಳು ರಸ್ತೆ ತುಂಬೆಲ್ಲಾ ಹರಡಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗ್ರಾಪಂ ಪಿಡಿಒಗಳು ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಛತೆಗೆ ಆದ್ಯತೆ ನೀಡುವ ಜತೆಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.

    ಗುಳೆ ಹೋದ ಕೂಲಿಕಾರರು ಮರಳಿ ಸ್ವಗ್ರಾಮಗಳಿಗೆ ಬಂದಿದ್ದು, ಬಡಕೂಲಿಕಾರರಿಗೆ ಜಾಬ್‌ಕಾರ್ಡ್ ನೀಡಿ ಖಾತ್ರಿ ಯೋಜನೆಯಡಿ ಕೆಲಸ ಒದಗಿಸಬೇಕು ಎಂದು ತಾಕೀತು ಮಾಡಿದರು. ತಾಪಂ ಅಧ್ಯಕ್ಷೆ ಶ್ವೇತಾ ವೆಂಕನಗೌಡ ಪಾಟೀಲ್, ತಾಪಂ ಇಒ ಪಂಪಾಪತಿ ಹಿರೇಮಠ ಸೇರಿದಂತೆ ಜಿಪಂ, ತಾಪಂ ಅಧಿಕಾರಿಗಳು ಮತ್ತು ಗ್ರಾಪಂ ಪಿಡಿಒಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts