More

    ಪ್ರಯೋಗಾಲಯದಲ್ಲಿ ನೀರಿನ ಮಾದರಿಗಳ ಪರೀಕ್ಷೆ, ಕುಡಿಯಲು ಯೋಗ್ಯವಲ್ಲ

    ಚಿಕ್ಕಬಳ್ಳಾಪುರ: ಬೇಸಿಗೆಯಲ್ಲಿ ವ್ಯಾಪಕವಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಆತಂಕದ ನಡುವೆ ಜಿಲ್ಲೆಯಲ್ಲಿ 1320 ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಈ ಪೈಕಿ ಮೂರು ಮಾದರಿಗಳು ಮಾತ್ರ ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿ ಬಂದಿದೆ.
    ಜಿಲ್ಲೆಯ 6 ತಾಲೂಕುಗಳ ಪೈಕಿ ಬಾಗೇಪಲ್ಲಿ, ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲೂಕಿನಲ್ಲಿ ತಲಾ 1 ಮಾದರಿಯ ನೀರಿನಲ್ಲಿ ದೋಷ ಕಂಡು ಬಂದಿದೆ. ಇದಕ್ಕೆ ಪಯಾರ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಿದ್ದಾರೆ.
    ಬೇಸಿಗೆ ಕಾಲದ ಜತೆಗೆ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿಯ ಸಂದರ್ಭದಲ್ಲಿ ರಾಜ್ಯದ ಕೆಲವೆಡೆ ಕಾಲರ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಕಳೆದ ಮಾರ್ಚ್ನಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 1,320 ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 3 ಹೊರತುಪಡಿಸಿದಂತೆ ಉಳಿದವುಗಳಲ್ಲಿ ಯಾವುದೇ ಸಮಸ್ಯೆ ಇಲ್ಲ.

    *ಪರ್ಯಾಯ ಕ್ರಮದ ಭರವಸೆ
    ಕುಡಿಯಲು ಯೋಗ್ಯವಲ್ಲ ನೀರಿನ ಮಾದರಿಗಳು ಕಂಡು ಬಂದಿರುವ ಮೂರು ಗ್ರಾಮಗಳಲ್ಲಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಲು ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಸಂಬಂಧಪಟ್ಟ ಗ್ರಾ.ಪಂ.ಪಿಡಿಒಗಳಿಗೆ ಸೂಚಿಸಲಾಗಿದೆ. ಜತೆಗೆ ಗ್ರಾಮದ ವಾಟರ್ ಮೆನ್ ಗಳಿಗೆ ಸ್ವಚ್ಛತೆ ನಿರ್ವಹಣೆಯ ಬಗ್ಗೆ ಅಗತ್ಯ ಸಲಹೆಗಳನ್ನು ನೀಡಲಾಗಿದೆ.

    *30 ಮಾದರಿಗಳ ಸಂಗ್ರಹ
    ಜಿಲ್ಲೆಯಲ್ಲಿ ಕುಡಿಯುವ ನೀರಿನ ಮಾದರಿಗಳ ಜತೆಗೆ ಆಹಾರದ ಮಾದರಿಗಳನ್ನೂ ಸಹ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದು, ಏ.1 ರಿಂದ ಇಲ್ಲಿಯವರೆಗೆ 30 ಆಹಾರದ ವಿವಿಧ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಮುಖ್ಯವಾಗಿ ರಸ್ತೆ ಬದಿಗಳು ಹಾಗೂ ತಳ್ಳುವ ಗಾಡಿಗಳಲ್ಲಿ ಮಾರುವ ವಿವಿಧ ಆಹಾರ ಮತ್ತು ಕತ್ತರಿಸಿದ ಹಣ್ಣುಗಳು ಇತರ ಸಿದ್ಧಪಡಿಸಿದ ಆಹಾರ ತಿಂಡಿ, ಪದಾರ್ಥಗಳನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪ್ರಸ್ತುತ ಪರೀಕ್ಷಾ ವರದಿ ಇನ್ನೂ ಬಂದಿಲ್ಲ. ಮಾಹಿತಿ ಸಿಕ್ಕಿದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts