More

    ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು ಅಪರಾಧ

    ಹಾವೇರಿ: 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 14ರಿಂದ 18 ವರ್ಷದ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಅಪಾರಧವಾಗಿದೆ ಎಂದು ಸಿ.ಜೆ.ಎಂ. ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ. ಹೇಳಿದರು.
    ನಗರದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಮಂಗಳವಾರ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕಾರ್ಮಿಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಮಿಕರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು. ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲ ಎನ್.ಎನ್.ಡಿಳ್ಳೆಪ್ಪನವರ ಕಾರ್ಮಿಕರ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.
    ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ಜಿಲ್ಲಾ ವಕೀಕರ ಸಂಘದ ಅಧ್ಯಕ್ಷ ಪಿ.ಸಿ.ಬಣಕಾರ, ಹಾವೇರಿ ವೃತ್ತ ಕಾರ್ಮಿಕ ನಿರೀಕ್ಷಕಿ ಲತಾ ಟಿ.ಎಸ್., ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts