More

    ಸಿರಿಧಾನ್ಯಗಳ ಬಳಕೆಯಲ್ಲಿ ಅರಿವಿನ ಕೊರತೆ: ಸಚಿವ ಮಧು

    ಶಿವಮೊಗ್ಗ: ಕೃಷಿಕರು ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ವಿಮುಖರಾಗಿ ಆಧುನಿಕ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಸಿರಿಧಾನ್ಯಗಳ ಬಳಕೆ ಅದರ ಮಹತ್ವದ ಬಗ್ಗೆ ಜನರಲ್ಲಿ ಅರಿವಿನ ಕೊರತೆಯೂ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬೇಸರ ವ್ಯಕ್ತಪಡಿಸಿದರು.

    ಜಿಲ್ಲಾಡಳಿತದಿಂದ ಬುಧವಾರ ಏರ್ಪಡಿಸಿದ್ದ ಸಿರಿಧಾನ್ಯ ಹಬ್ಬ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಆಹಾರ ಪದ್ಧತಿಗಳಿವೆ. ಅವುಗಳನ್ನು ಮತ್ತೆ ಬಳಕೆಗೆ ತರಬೇಕಾದ ಅವಶ್ಯಕತೆಯಿದೆ. ಕಾಯಿಲೆಗಳಿಂದ ದೂರವಿರುವ ಆಹಾರ ಪದ್ಧತಿ ಅನುಸರಿಸುವ ಅಗತ್ಯವಿದೆ ಎಂದರು.
    ಆರೋಗ್ಯಕರ ಜೀವನಕ್ಕೆ ಸತ್ವಯುತ ಆಹಾರ, ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳನ್ನು ಬಳಕೆ ಪೂರಕವಾಗಿದೆ. ನಮ್ಮ ಹಿಂದಿನ ತಲೆಮಾರಿನವರು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಅನುಸರಿಸುತ್ತಿದ್ದ ಆಹಾರ ಪದ್ಧತಿಯನ್ನು ನಾವು ಅನುಸರಿಬೇಕಿದೆ. ರಾಗಿ, ಜೋಳ, ನವಣೆ ಮುಂತಾದ ಹೆಚ್ಚು ನಾರಿನ ಅಂಶವಿರುವ ಆಹಾರಗಳು ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ಒದಗಿಸುತ್ತವೆ ಎಂದು ಹೇಳಿದರು.
    ಬದಲಾದ ಜೀವನಶೈಲಿಯಿಂದಾಗಿ ಎಲ್ಲರೂ ತಮ್ಮ ಆಹಾರ ಪದ್ಧತಿಯನ್ನು ಮರೆತಿರುವುದು ದುರದೃಷ್ಟಕರ. ಅನೇಕ ಕಾಯಿಲೆಗಳ ನಿಯಂತ್ರಣಕ್ಕೆ ಸಿರಿಧಾನ್ಯಗಳು ಸಹಕಾರಿ. ಪೋಷಕಾಂಶಗಳ ಖಜಾನೆ ಎನಿಸಿರುವ ಸಿರಿಧಾನ್ಯಗಳು ದೇಹವನ್ನು ಸದೃಢಗೊಳಿಸುವುದರ ಜತೆಗೆ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ ಎಂದರು.
    ಶಾಸಕಿ ಶಾರದಾ ಪೂರ‌್ಯಾನಾಯ್ಕಾ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಡಾ.ಆರ್.ಸಿ.ಜಗದೀಶ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹದೇವಪ್ಪ, ರೈತ ಮುಖಂಡ ಕೆ.ಟಿ.ಗಂಗಾಧರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಇದ್ದರು.
    ಸಮಗ್ರ ಕೃಷಿ ಪದ್ಧತಿಯ 10 ಮಂದಿ ಸಾಧಕ ಕೃಷಿಕರಿಗೆ ಹಾಗೂ ಇಬ್ಬರು ಶ್ರೇಷ್ಠ್ಟ ಕೃಷಿಕರಿಗೆ ತಲಾ 25 ಸಾವಿರ ರೂ. ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ವಾಗ್ಮಿ ಹಿರೇಮಗಳೂರು ಕಣ್ಣನ್ ಸಿರಿಧಾನ್ಯಗಳ ಮಹತ್ವ ಕುರಿತು ಉಪನ್ಯಾಸ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts