More

    ಮೂಲಭೂತ ಸೌಲಭ್ಯ ವಂಚನೆ; ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು

    ಚಾಮರಾಜನಗರ: ಅಗತ್ಯ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದನ್ನು ಖಂಡಿಸಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ನಾಗಣ್ಣನಗರ ಗ್ರಾಮದಲ್ಲಿ ನಡೆದಿದೆ.

    ರೈತ ಮುಖಂಡ ಪಳನಿಸ್ವಾಮಿ ಮಾತನಾಡಿ ಗ್ರಾಮದಲ್ಲಿ ಸುಮಾರು 120ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು ನಾಗಣ್ಣನಗರವು 20 ವರ್ಷಗಳ ಹಿಂದೆ ಅಜ್ಜಿಪುರ ಗ್ರಾಮ ಪಂಚಾಯಿತಿಗೆ ಸೇರಿತ್ತು. ಆದರೆ, ಅಧಿಕಾರಿಗಳು ಈಗ ರಾಮ್​ಪುರ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಪ್ರಸ್ತುತ ನಾಗಣ್ಣ ನಗರ ಗ್ರಾಮವು ಯಾವ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ ಎಂಬುದನ್ನ ಅಧಿಕಾರಿಗಳು ಸ್ಪಷ್ಟವಾಗಿ ಹೇಳಿಲ್ಲ. ಆದ್ದರಿಂದ ಮೂಲಭೂತ ಸೌಕರ್ಯಗಳನ್ನ ಪಡೆದುಕೊಳ್ಳಲು ಗ್ರಾಮಸ್ಥರು ಹೆಣಗಾಡುವಂತಅಗಿದೆ ಎಂದು ಹೇಳಿದ್ದಾರೆ.

    ಮೂಲಭೂತ ಸೌಲಭ್ಯ ವಂಚನೆ; ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು

    ಅನುಭೋಗದಲ್ಲಿರುವ ಜಮೀನುಗಳು ರೈತರ ಹೆಸರಿಗೆ ಖಾತೆಯಾಗಿಲ್ಲ ಇದರಿಂದ ಇಲ್ಲಿನ ರೈತರು ಕೇಂದ್ರ-ರಾಜ್ಯ ಸರ್ಕಾರದ ಯೋಜನೆಗಳಾದ ಪಿಎಂ ಕಿಸಾನ್​ ಸಮ್ಮಾನ್​ ಯೋಜನೆ, ಕೃಷಿ ಪರಿಕರಗಳು, ಬಿತ್ತನೆ ಬೀಜ, ಗೊಬ್ಬರವನಗನ ಪಡೆಯಲು ಸಾಧ್ಯವಾಗುತ್ತಿಲ್ಲ. ಇದಲ್ಲದೆ ವೃದ್ಧಾಪ್ಯ ವೇತನ ಸೇರಿದಂತೆ ಮಾಸಿಕ ಪಿಂಚಣಿ ಯೋಜನೆಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

    ನಾಗಣ್ಣಮನಗರ ಗ್ರಾಮದ ಎಲ್ಲಾ ಸಮಸ್ಯೆಗಳನ್ನ ಒಂದು ವಾರದೊಳಗೆ ಜಿಲ್ಲಾಡಳಿತ-ತಾಲ್ಲೂಕು ಆಡಳಿತದ ಅಧಿಕಾರಿಗಳು ಖುದ್ದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯನ್ನ ಬಹಿಷ್ಕರಿಸಿ ತಾಲ್ಲೂಕು-ಜಿಲ್ಲಾಡಳಿತದ ವಿರುದ್ದ ಉಗ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

    ಇದನ್ನೂ ಓದಿ: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್​ ಗಾಂಧಿ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗಿದೆ…

    ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ವಿಜಯಾನಂದ’ ಬಯೋಪಿಕ್ ಪ್ರದರ್ಶನ; ನೂರಾರು ಜನರಿಂದ ವೀಕ್ಷಣೆ, ಮೆಚ್ಚುಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts