More

    ಜಿಲ್ಲೆಯಲ್ಲಿ ರಕ್ತಸಂಗ್ರಹ ಕೊರತೆ

    ಸೋಮವಾರಪೇಟೆ : ಎಸ್‌ವೈಎಸ್ ಮತ್ತು ಎಸ್‌ಎಸ್‌ಎಫ್ ಸೋಮವಾರಪೇಟೆ ಸರ್ಕಲ್, ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಬುಧವಾರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
    ಶಿಬಿರಕ್ಕೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚಿದೆ. ಸಂಗ್ರಹ ಕಡಿಮೆಯಾಗುತ್ತಿರುವುದರಿಂದ ತುರ್ತು ಸಂದರ್ಭದಲ್ಲಿ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಎರಡು ಮೂರು ದಿನಗಳಿಗೊಮ್ಮೆಯಾದರೂ, ರಕ್ತದಾನ ಶಿಬಿರಗಳು ನಡೆದಲ್ಲಿ ಸಮಸ್ಯೆಯಿಂದ ಪಾರಾಗಬಹುದು ಎಂದು ತಿಳಿಸಿದರು.

    ಜಿಲ್ಲೆಯವರೊಂದಿಗೆ ಹೊರ ಜಿಲ್ಲೆಯಿಂದಲೂ ಸಾಕಷ್ಟು ರೋಗಿಗಳು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುತ್ತಿರುವುದರಿಂದ ತಿಂಗಳಿಗೆ 500ಕ್ಕೂ ಹೆಚ್ಚಿನ ಯೂನಿಟ್ ರಕ್ತ ಬೇಕಾಗಿದೆ. ಎಲ್ಲ ಗುಂಪಿನ ರಕ್ತವನ್ನು ಸಂಗ್ರಹ ಮಾಡಬೇಕಿರುವುದರಿಂದ ಕೊರತೆ ಹೆಚ್ಚಾಗಿದೆ ಎಂದು ಹೇಳಿದರು. ಎಸ್‌ವೈಎಸ್ ಸೋಮವಾರಪೇಟೆ ಸರ್ಕಲ್ ಅಧ್ಯಕ್ಷ ತಣೀರುಹಳ್ಳದ ಶಫಿ ಸಹದಿ ಮಾತನಾಡಿ, ನಮ್ಮ ಸಂಘವೂ ದೇಶದ ಸಂವಿಧಾನವನ್ನು ಗೌರವಿಸುವ ಮೂಲಕ ಸಮಾಜ ಸೇವೆ ಮಾಡಿಕೊಂಡು ಬರುತ್ತಿದೆ. ಪ್ರತಿವರ್ಷ ರಕ್ತದಾನ ಶಿಬಿರ ಆಯೋಜಿಸುತ್ತಿದ್ದೇವೆ ಎಂದು ಹೇಳಿದರು.

    ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ, ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಆಟೋಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಗಂಗಾಧರ್ ಮತ್ತು ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts