ಮೂಲಸೌಕರ್ಯ ಕೊರತೆಯಿಂದ ಮಕ್ಕಳ ಕೊರತೆ

gan (1)
Published on

ಕುಂದಾಪುರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಮೂಲಸೌಕರ್ಯ, ಶಿಕ್ಷಕರ ಕೊರತೆ ಕಾರಣವಾಗಿದ್ದು, ಸರ್ಕಾರವೂ ನೇರ ಹೊಣೆ ಎಂದು ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಬೇಸರ ಹೊರಹಾಕಿದರು.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾ ಘಟಕ, ಶಿವಪ್ರಸಾದ್ ಗ್ರಾಂಡ್ ಕುಂದಾಪುರ, ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಸಹೋಗದಲ್ಲಿ ಆಯೋಜನೆಗೊಂಡ ಸ್ವಾತಂತ್ರೃ ದಿನಾಚರಣೆ ಪ್ರಯುಕ್ತದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕೋಟೇಶ್ವರ ಗೀತಾ ಚ್.ಎಸ್.ಎನ್ ಫೌಂಡೇಶನ್‌ನ ಅಧ್ಯಕ್ಷ ಶಂಕರ್ ಐತಾಳ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ.ನಾಗರಾಜ ಶುಭ ಹಾರೈಸಿದರು.

ಕುಂದಾಪುರ ಪುರಸಭಾ ಸದಸ್ಯ ಅಬು ಮೊಹಮ್ಮದ್ ಮುಜಾವರ್, ಮೊಯಿದಿನ್ ಕುಟ್ಟಿ, ಅಶ್ವಥ್ ಕುಮಾರ್ ಇತರರಿದ್ದರು. ಪ್ರಮೋದಾ ಕುಶಲ್ ಶೆಟ್ಟಿ ಸ್ವಾಗತಿಸಿದರು. ವರದಾ ಸುಧಾಕರ್ ಆಚಾರ್ಯ ವಂದಿಸಿದರು. ದೀಪಾ ಜಪ್ತಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net