More

    ಎಸ್ಸಿ, ಎಸ್ಟಿ ಸಮುದಾಯದವರಿಗೆ ಸೌಲಭ್ಯ ಕೊರತೆ

    ಬಾಳೆಹೊನ್ನೂರು: ಇತ್ತೀಚಿನ ದಿನಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯದವರಿಗೆ ಸರ್ಕಾರಿ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಜಿಲ್ಲಾ ಎಸ್ಸಿ, ಎಸ್ಟಿ ಸಮನ್ವಯ ಸಮಿತಿ ಅಧ್ಯಕ್ಷ ಎ.ಸಿ.ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು.
    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಎಸ್ಸಿ, ಎಸ್ಟಿ ಸಮನ್ವಯ ಸಮಿತಿ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಂಗದವರ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಬಗ್ಗೆ ಸಮುದಾಯ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸಂಘಟನೆ ಬಲಪಡಿಸಬೇಕಿದೆ. ಇಂದಿಗೂ ಕೂಡ ಎಸ್ಸಿ, ಎಸ್ಟಿ ಸಮುದಾಯದವರಿಗೆ 94ಸಿ ಅಡಿ ಅರ್ಜಿ ಸಲ್ಲಿಸಿದ್ದರೂ ಹಕ್ಕುಪತ್ರ ದೊರೆತಿಲ್ಲ. ಸಮುದಾಯದವರಿಗೆ ನಿವೇಶನ ಮಂಜೂರು ಮಾಡಿಲ್ಲ ಎಂದು ಹೇಳಿದರು.
    ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಬಿ.ಡಿ.ಈರಪ್ಪ ಮಾತನಾಡಿ, ಅರಣ್ಯ ಹಕ್ಕು ಕಾಯ್ದೆಯಡಿ ಗಿರಿಜನರಿಗೆ ಹಕ್ಕುಪತ್ರ ನೀಡುವಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದರು.
    ಇದೇ ಸಂದರ್ಭದಲ್ಲಿ ಬಾಳೆಹೊನ್ನೂರು ಹೋಬಳಿ ಸಮಿತಿ ಪುನರ್ ರಚಿಸಲಾಯಿತು. ಸಮಿತಿಗೆ ಮಂಜುನಾಥ್ ರವಿ (ಅಧ್ಯಕ್ಷ), ಸತೀಶ್ ಜಕ್ಕಣಕ್ಕಿ (ಉಪಾಧ್ಯಕ್ಷ), ರವಿ ಕಾನೂರು, ಸತೀಶ್ ತಂಗಳುಮನೆ (ಕಾರ್ಯದರ್ಶಿ), ಶಿವಣ್ಣ ಮಾಗುಂಡಿ (ಖಜಾಂಚಿ) ಆಯ್ಕೆಯಾಗಿದ್ದಾರೆ.
    ಸಮಿತಿ ಜಿಲ್ಲಾ ಉಪಾಧ್ಯಕ್ಷ ಸುಬ್ರಹ್ಮಣ್ಯ, ತಾಲೂಕು ಅಧ್ಯಕ್ಷ ಶೆಟ್ಟಿಕೊಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಎಂ.ವಿ.ಭವಾನಿ, ಪ್ರಮುಖರಾದ ಗೋಪಾಲ್, ಸುರೇಂದ್ರ, ಡಿ.ಸಿ.ಲಕ್ಷ್ಮಣ, ಶಂಕರ, ಸುಧಾಕರ, ರಮೇಶ್, ನಾರಾಯಣ, ಸುರೇಶ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts