ವಿಜಯಪುರ: ಇತ್ತೀಚಿನ ದಿನಗಳಲ್ಲಿ ಜನರಲ್ಲಿನ ತಾಳ್ಮೆಯ ಕೊರತೆಯಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಮನೊರೋಗ ತ ಡಾ. ಸಂತೋಷ ರಾಮದುರ್ಗ ಹೇಳಿದರು.
ನಗರದ ಬಿಎಲ್ಡಿಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿಶ್ವ ಆತ್ಮಹತ್ಯೆ ತಡೆ ದಿನ ಮತ್ತು ಅದರ ಉಪಚಾರ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಕಾಲೇಜಿನ ಯುವಕ ಮತ್ತು ಯುವತಿಯರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದಕ್ಕೆ ತಾಳ್ಮೆಯ ಕೊರತೆಯೇ ಪ್ರಮುಖ ಕಾರಣವಾಗಿದೆ. ಯಾವ ವ್ಯಕ್ತಿ ಆತ್ಮಹತ್ಯೆಗಳ ಬಗ್ಗೆ ಹೆಚ್ಚಾಗಿ ಮಾತನಾಡುತ್ತಿರುತ್ತಾನೋ ಅಂಥವರ ಬಗ್ಗೆ ನಾವು ತೀವ್ರ ನಿಗಾವಹಿಸಬೇಕು. ಅಲ್ಲದೆ, ಅವರಿಗೆ ಸಮಾಲೋಚನೆ ನಡೆಸಿ ಸೂಕ್ತ ಸೂಚನೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ಯಾವುದೇ ವ್ಯಕ್ತಿಯಲ್ಲಿ ಆತ್ಮಹತ್ಯೆಯ ಮುನ್ಸೂಚನೆ ಕಂಡು ಬಂದರೆ ತಣವೇ ಅವರು ಮಾನಸಿಕ ರೋಗ ತರನ್ನು ಸಂಪರ್ಕಿಸುವುದು ಬಹಳ ಮುಖ್ಯವಾಗಿದೆ. ಮಾನಸಿಕ ಆರೋಗ್ಯ ಕೂಡ ಇತರ ಆರೋಗ್ಯ ಸಮಸ್ಯೆಗಳಂತೆ ಇರುತ್ತದೆ. ಹೀಗಾಗಿ ಯಾವುದೇ ರೀತಿಯ ಸಾಮಾಜಿಕ ವಿಷಯಗಳಿಗೆ ತಲೆ ಕೆಡಿಸಿಕೊಳ್ಳದೆ ನೇರವಾಗಿ ಮಾನಸಿಕ ರೋಗ ತರನ್ನು ಸಂಪರ್ಕಿಸಿ ಗುಪ್ತ ಸಮಾಲೋಚನೆ ಮಾಡುವ ಮೂಲಕ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದರು.
ಡಾ. ಗೌತಮಿ ಮಾತನಾಡಿ, ವಿಶ್ವಾದ್ಯಂತ ಪ್ರತಿವರ್ಷ ಏಳು ಲ ಜನರು ಆತ್ಮಹತ್ಯೆಗೆ ಶರಣಾದರೆ, ಭಾರತದಲ್ಲಿ 1.60 ಲ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾವೆಲ್ಲರೂ ಆತ್ಮಹತ್ಯೆ ಕುರಿತು ಮುಕ್ತವಾಗಿ ಚರ್ಚಿಸುವುದರಿಂದ ಇಂಥ ಪ್ರಕರಣಗಳನ್ನು ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೊಪಡೆ, ಮನೋರೋಗ ಶಾಸ ವಿಭಾಗದ ಮುಖ್ಯಸ್ಥ ನಜೀರ್ ಬಳಗಾರ, ಡಾ. ನಿಶಾಂತ, ಸೌರಭ ಬಿರಾದಾರ, ನವೀನ ಚಿಟ್ಟಿ, ಮಹೇಂದ್ರಕುಮಾರ, ರಿಯಾಜ್, ಶಿಲ್ಪಾ ಬಳಗಾರ, ಅಪ್ಪನಗೌಡ ಪಾಟೀಲ, ಡಾ. ಅಮಿತಕುಮಾರ ಬಿರಾದಾರ ಮತ್ತಿತರರಿದ್ದರು.