21 C
Bengaluru
Thursday, January 23, 2020

ಟ್ರಾನ್ಸಿಟ್ ಹಾಸ್ಟೆಲ್​ಗೆ ಪ್ರಚಾರ ಕೊರತೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರು: ರಾಜ್ಯದ ವಿವಿಧೆಡೆಗಳಿಂದ ಪರೀಕ್ಷೆ, ಸಂದರ್ಶನ ದಂತಹ ಕೆಲಸಗಳಿಗೆ ಆಗಮಿಸುವ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರಿನಲ್ಲಿ ನಿರ್ವಿುಸಿರುವ ಟ್ರಾನ್ಸಿಟ್ ಹಾಸ್ಟೆಲ್​ಗಳು ಸೂಕ್ತ ಪ್ರಚಾರವಿಲ್ಲದೆ ಭಣಗುಡುತ್ತಿವೆ.

ನಗರದ ವಿವಿಧೆಡೆ ಸ್ಥಾಪಿಸಿರುವ 12 ಟ್ರಾನ್ಸಿಟ್ ಹಾಸ್ಟೆಲ್​ಗಳಲ್ಲಿ ಆರು ತಿಂಗಳಿಂದ ಉಪಯೋಗ ಪಡೆದ ಮಹಿಳೆಯರ ಸಂಖ್ಯೆ 24 ಮಾತ್ರ. ಬೆಂಗಳೂರಿನಲ್ಲಿ 2-3 ದಿನ ಉಳಿದು ಕೊಳ್ಳಲು ಹಣದ ಖರ್ಚಿನ ಜತೆಗೆ ಸುರಕ್ಷತೆಯ ಕೊರತೆಯನ್ನೂ ನೀಗಿಸಲು ಆರಂಭಿಸಿದ ಯೋಜನೆಯೊಂದು, ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಪ್ರಚಾರದ ಕೊರತೆಯಿಂದ ಸೊರಗುತ್ತಿದೆ.

ಉದ್ಯೋಗ ಸಂದರ್ಶನ, ವೃತ್ತಿಪರ ಕೋರ್ಸ್ ಗಳ ಪರೀಕ್ಷೆಗಳು, ಯುಪಿಎಸ್​ಸಿ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ನಿತ್ಯ ಸಾವಿರಾರು ಯುವತಿಯರು ಹಾಗೂ ಮಹಿಳೆಯರು ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸುತ್ತಾರೆ. ಬೆಂಗಳೂರಿನಲ್ಲಿ ಸ್ನೇಹಿತರು ಅಥವಾ ಸಂಬಂಧಿಕರ ಮನೆಯಿದ್ದರೆ ಉಳಿದುಕೊಳ್ಳುತ್ತಾರೆ. ಹಣಕಾಸಿನ ಲಭ್ಯತೆ ಇರುವವರು ಹೋಟೆಲ್​ನಲ್ಲಿ ರೂಮ್ ಮಾಡುತ್ತಾರೆ. ಆದರೆ, ಬಹಳಷ್ಟು ಜನರುರೈಲು ನಿಲ್ದಾಣ ಸೇರಿ ಸಾರ್ವಜನಿಕ ಸ್ಥಳದಲ್ಲೇ ವಸತಿ ಕಂಡುಕೊಳ್ಳುತ್ತಾರೆ. ಶೌಚಗೃಹ, ನಿದ್ರೆಗೆಸೂಕ್ತ ವ್ಯವಸ್ಥೆ ಇಲ್ಲದ ಕಾರಣಕ್ಕೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗದ ಜತೆಗೆ ಸುರಕ್ಷತೆ ದೃಷ್ಟಿಯಿಂದಲೂ ಅಪಾಯವಿರುತ್ತದೆ. ಈ ಕಾರಣಕ್ಕೆ ಇಲಾಖೆಯಿಂದ ಎನ್​ಜಿಒಗಳ ಸಹಯೋಗದಲ್ಲಿ 12 ಟ್ರಾನ್ಸಿಟ್ ಹಾಸ್ಟೆಲ್​ಗಳನ್ನು ಸ್ಥಾಪಿಸಲಾಗಿದೆ.

ಕೇವಲ 24 ಮಂದಿ ಬಳಕೆ: ಜಯಮಹಲ್, ಶಂಕರಪುರ, ಮಿಷನ್ ರಸ್ತೆ, ಸಂಪಂಗಿರಾಮನಗರ, ಕುಮಾರಸ್ವಾಮಿ ಬಡಾವಣೆ, ಜಯನಗರ, ಮೈಸೂರು ರಸ್ತೆ, ಕನಕಪುರ ರಸ್ತೆ, ನಾಗರಭಾವಿ, ಕೋರಮಂಗಲ ಹಾಗೂ ಜ್ಞಾನಭಾರತಿ ಆವರಣದಲ್ಲಿ 12 ಟ್ರಾನ್ಸಿಟ್ ಹಾಸ್ಟೆಲ್​ಗಳು ಆರು ತಿಂಗಳಿಂದ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಯಾವುದೇ ವರ್ಗದ ಮಹಿಳೆಯರು ಹಾಗೂ ಯುವತಿಯರು ಗರಿಷ್ಠ 3 ದಿನದವರೆಗೆ ಉಳಿದುಕೊಳ್ಳಬಹುದು. ಉಚಿತ ಊಟ, ಉಪಾಹಾರ, ಸ್ನಾನಕ್ಕೆ ಬಿಸಿನೀರು, ಭದ್ರತಾ ಕಪಾಟು, ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪರೀಕ್ಷೆ ಅಥವಾ ಸಂದರ್ಶನದ ಪ್ರವೇಶಪತ್ರ, ವಿಳಾಸಸಹಿತ ಗುರುತಿನ ಚೀಟಿ ನೀಡಿದರೆ ಉಚಿತವಾಗಿ ಕೊಠಡಿ ಸಿಗುತ್ತದೆ. ಒಬ್ಬ ವ್ಯಕ್ತಿ ಉಳಿದುಕೊಳ್ಳಲು ಎನ್​ಜಿಒಗೆ ಸರ್ಕಾರದ ವತಿಯಿಂದ ದಿನವೊಂದಕ್ಕೆ 1,000 ರೂ. ನೀಡಲಾಗುತ್ತದೆ. ಆದರೆ ಇಲ್ಲಿಯವರೆಗೆ ಕೇವಲ 24 ಮಹಿಳೆಯರು ಉಪಯೋಗ ಪಡೆದುಕೊಂಡಿದ್ದಾರೆ. ಅದರಲ್ಲೂ ಮೂರು ಹಾಸ್ಟೆಲ್​ಗಳಲ್ಲಿ ಮಾತ್ರ ಈ 24 ಮಹಿಳೆಯರು ಪ್ರವೇಶ ಪಡೆದಿದ್ದು, ಉಳಿದ 9 ಖಾಲಿ ಉಳಿದಿವೆ. ಜಿಲ್ಲಾ ಮಟ್ಟದಲ್ಲಿ ಕಾಲೇಜು, ಹಾಸ್ಟೆಲ್​ಗಳು ಹಾಗೂ ಮಹಿಳೆಯರು ಸಂಚರಿಸುವ ಇತರೆ ಸ್ಥಳಗಳಲ್ಲಿ ಪ್ರಚಾರ ನೀಡಿದ್ದರೆ ಸಾಕಷ್ಟು ಜನರು ಉಪಯೋಗ ಪಡೆಯುತ್ತಿದ್ದರು. ನಿರಾಸಕ್ತಿಯಿಂದಾಗಿ ಉತ್ತಮ ಯೋಜನೆಯೊಂದು ನೆಲಕಚ್ಚುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಸೌಲಭ್ಯ ಪಡೆಯಲು ಸಂರ್ಪಸಿ: ಟ್ರಾನ್ಸಿಟ್ ಹಾಸ್ಟೆಲ್​ಗಳ ಉಪಯೋಗ ಪಡೆಯಬಯಸುವವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಚೇರಿ (ಸ್ತ್ರೀಶಕ್ತಿ ಶಾಖೆ) (080- 2235 3833) ಅಥವಾ ಉಪನಿರ್ದೇಶಕರ (080- 2657 8688) ಕಚೇರಿ ದೂರವಾಣಿಯನ್ನು ಸಂರ್ಪಸಬಹುದು.

ಪರೀಕ್ಷೆ, ಸಂದರ್ಶನ ಎದುರಿಸಲು ಒಬ್ಬಂಟಿಯಾಗಿ ಬೆಂಗಳೂರಿಗೆ ಬರುವ ಯುವತಿಯರು ಹಾಗೂ ಮಹಿಳೆಯರಿಗೆ ಉಚಿತವಾಗಿ ಹಾಗೂ ಸುರಕ್ಷಿತವಾಗಿ ಉಳಿಯಲು ಟ್ರಾನ್ಸಿಟ್ ಹಾಸ್ಟೆಲ್ ಆರಂಭಿಸಲಾಗಿದೆ. ಈ ಮೂಲಕ ಸರ್ಕಾರದ ಯೋಜನೆಯ ಲಾಭ ಪಡೆಯಬೇಕು.

| ಕೆ.ಎ. ದಯಾನಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ

ರಮೇಶ ದೊಡ್ಡಪುರ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...