ಮದುವೆಯಾಗಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ!

death
ಸಾಂದರ್ಭಿಕ ಚಿತ್ರ
Published on

ನೆಲಮಂಗಲ: ಕೌಟುಂಬಿಕ ಕಲಹಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುವ ಬಹಳ ಪ್ರಕರಣಗಳ ನಡುವೆ ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ವಿರಳ ಪ್ರಕರಣವೊಂದು ನಡೆದಿದೆ. ಬೆಂಗಳೂರು ಉತ್ತರ ತಾಲೂಕು ಚಿಕ್ಕಬಿದರಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಬಿದರಕಲ್ಲು ನಿವಾಸಿ ಚಂದನಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಕ್ಕನಿಗೂ ಮದುವೆಯಾಗಿಲ್ಲ, ತನಗೂ ಮದುವೆ ಆಗಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ನೊಂದು ಈ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಆದರೆ ಈ ಯುವತಿ ಡೆತ್​ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net