More

    ರಾತ್ರಿ ಕೆಲ್ಸ ಮುಗಿಸಿ ಹಿಂತಿರುಗುತ್ತಿದ್ದ ಮಹಿಳಾ ಎಸ್​ಐಗೆ ಕಾದಿತ್ತು ಶಾಕ್! ದುಷ್ಟರ ಕೈಯಿಂದ ಬಚಾವ್​ ಆಗಿದ್ದೇ ರೋಚಕ

    ಭುವನೇಶ್ವರ: ಜನರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲ ಅಂದರೆ ಜನ ಸಾಮಾನ್ಯರ ಗತಿ ಏನು ಎಂಬ ಪ್ರಶ್ನೆ ಒಡಿಶಾದಲ್ಲಿ ನಡೆದ ಈ ಘಟನೆಯಿಂದ ಹುಟ್ಟುಕೊಂಡಿದೆ. ರಾತ್ರಿ ಕೆಲಸ ಮುಗಿಸಿಕೊಂಡು ಬರುತ್ತಿದ್ದ ಮಹಿಳಾ ಸಬ್​ ಇನ್ಸ್​ಪೆಕ್ಟರ್​ನನ್ನು ಕೆಲ ಗೂಂಡಾಗಳು ಬೆನ್ನತ್ತಿ ಹೋಗಿ ದೌರ್ಜನ್ಯ ಎಸಗಿರುವ ಘಟನೆ ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆದಿದೆ.

    ಇನ್ನೋವಾದಲ್ಲಿ ಬಂದ ದುಷ್ಕರ್ಮಿಗಳು ಮಹಿಳಾ ಎಸ್‌ಐ ಸುಭಾಶ್ರೀ ನಾಯಕ್ (36) ಅವರನ್ನು ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಘಟನೆ ಆಚಾರ್ಯ ವಿಹಾರ್ ಪ್ರದೇಶದ ಸೈನ್ಸ್ ಪಾರ್ಕ್ ಬಳಿ ಜನವರಿ 2 ರಂದು ಬೆಳಗಿನ ಜಾವ 1:30 ರ ಸುಮಾರಿಗೆ ಸುಭಾಶ್ರೀ ತನ್ನ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಸಂಭವಿಸಿದೆ.

    ತನ್ನನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಸುಭಾಶ್ರೀ ಕೂಡ ಕಾರನ್ನು ವೇಗವಾಗಿ ಓಡಿಸಿಕೊಂಡು ಪೊಲೀಸ್ ಮೀಸಲು ಮೈದಾನಕ್ಕೆ ಪ್ರವೇಶಿಸಿ, ಪ್ರಾಣ ಉಳಿಸಿಕೊಂಡಿದ್ದಾರೆ. ಪಾನಮತ್ತ ಸ್ಥಿತಿಯಲ್ಲಿದ್ದ ದುಷ್ಕರ್ಮಿಗಳು ಸುಭಾಶ್ರೀ ಅವರನ್ನು ಹಿಂಬಾಲಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಪ್ರಾಣಭಯದಿಂದ ಆಕೆ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಮೀಸಲು ಮೈದಾನದಲ್ಲಿದ್ದ ಕೆಲವು ಪೊಲೀಸ್ ಸಿಬ್ಬಂದಿ ಆಕೆಯ ಸಹಾಯಕ್ಕೆ ಧಾವಿಸಿದರು. ಬೇರೆ ಪೊಲೀಸ್​ ಅಧಿಕಾರಿಗಳನ್ನು ನೋಡುತ್ತಿದ್ದಂತೆ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

    ಈ ಘಟನೆ ಸಂಬಂಧ ಸುಭಾಶ್ರೀ ಅವರು ಸಹೀದ್ ನಗರ ಪೊಲೀಸರಿಗೆ ಲಿಖಿತ ದೂರು ನೀಡಿದ ನಂತರ ಪ್ರಕರಣ ಬಯಲಿಗೆ ಬಂದಿದೆ. ಈ ಘಟನೆ ಇಡೀ ಒಡಿಶಾವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರಿಗೆ ಹೀಗಾದರೆ ಜನ ಸಾಮಾನ್ಯರ ಗತಿ ಏನು? ರಾಜ್ಯದಲ್ಲಿ ಕಾನೂನು ಸುಸ್ಯವಸ್ಥೆ ಇಷ್ಟರ ಮಟ್ಟಿಗೆ ಹದಗೆಟ್ಟಿದೆಯಾ? ಎಂಬ ಪ್ರಶ್ನೆಗಳು ಚರ್ಚೆಯಾಗುತ್ತಿವೆ.

    ಆತಂಕಕಾರಿ ಘಟನೆಯ ಬಳಿಕ ಭಯಭೀತರಾಗಿರುವ ಸುಭಾಶ್ರೀ ಅವರು ದುಷ್ಕರ್ಮಿಗಳನ್ನು ಬಂಧಿಸಲು ಸಹೀದ್ ನಗರ ಪೊಲೀಸರ ನೆರವು ಕೋರಿದ್ದು, ವಿಶೇಷ ಪಡೆ ರಚನೆ ಮಾಡಿಕೊಂಡು ಕಾರ್ಯಾಚರಣೆಗೆ ಇಳಿದಿರುವ ಸಹೀದ್ ನಗರ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪೊಲೀಸರು ಆರೋಪಿಗಳ ವಾಹನವನ್ನು ಗುರುತಿಸಿದ್ದಾರೆ. ಅಲ್ಲದೆ, ಕಮಿಷನರೇಟ್ ಪೊಲೀಸರು ಶಂಕಿತರನ್ನು ಗುರುತಿಸಿದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ.

    ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಉಪ ಪೊಲೀಸ್ ಆಯುಕ್ತ ಪ್ರತೀಕ್ ಸಿಂಗ್, ದುಷ್ಕರ್ಮಿಗಳಿಂದ ಬೆನ್ನಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಲ್ಪಟ್ಟ ಮಹಿಳಾ ಎಸ್‌ಐ ಸುಭಾಶ್ರೀ ಅವರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಾರೆ. ಆಕೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಓವರ್ ಟೇಕ್ ಮಾಡುವ ವಿಚಾರದಲ್ಲಿ ದುಷ್ಕರ್ಮಿಗಳ ಜೊತೆ ಕಿರಿಕ್​ ಆಗಿದೆ. ಬಳಿಕ ರಿಸರ್ವ್ ಪೊಲೀಸ್ ಗ್ರೌಂಡ್ ಪ್ರವೇಶಿಸುವವರೆಗೂ ದುಷ್ಕರ್ಮಿಗಳು ಆಕೆಯನ್ನು ಹಿಂಬಾಲಿಸಿದ್ದಾರೆ. ಈ ಸಂಬಂಧ ಸುಭಾಶ್ರೀ ಸಹೀದ್ ನಗರ ಪೊಲೀಸರಿಗೆ ದೂರು ನೀಡಿದ್ದು, ಆಕೆಯನ್ನು ಹಿಂಬಾಲಿಸಿದ ವಾಹನದ ವಿವರಣೆಯ ಆಧಾರದ ಮೇಲೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ನಾವು ಕೆಲವು ಶಂಕಿತರನ್ನು ಗುರುತಿಸಿದ್ದೇವೆ ಮತ್ತು ಅವರನ್ನು ಹಿಡಿಯಲು ಹುಡುಕಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)

    80ರ ದಶಕದಲ್ಲಿ 1 ಕೆಜಿ ಗೋಧಿಗೆ ಬೆಲೆ ಎಷ್ಟಿತ್ತು ಗೊತ್ತಾ? ವೈರಲ್​ ಆಗ್ತಿರೋ ಹಳೆಯ ಬಿಲ್​ ನೋಡಿದ್ರೆ ಹುಬ್ಬೇರೋದು ಖಚಿತ!

    ನಟಿ ಗಾಯತ್ರಿ ರಘುರಾಮ್​ ಆರೋಪಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ತಾಳ್ಮೆ ಕಳೆದುಕೊಂಡ ಅಣ್ಣಾಮಲೈ!

    ಕಾಂಗ್ರೆಸ್​ ಸಭೆಯಲ್ಲಿ ಗಲಾಟೆ ಪ್ರಕರಣ: ಬ್ಲಾಕ್ ಕಾಂಗ್ರೆಸ್​ ಅಧ್ಯಕ್ಷೆ ಸೇರಿದಂತೆ ಇಬ್ಬರ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts