

ಬೆಳ್ತಂಗಡಿ: ಸಾಮಾಜಿಕ ಚಿಂತನೆಗಳೊಂದಿಗೆ ಆಚರಿಸುವ ಧಾರ್ಮಿಕ ಹಬ್ಬ ಅಥವಾ ಕಾರ್ಯಕ್ರಮ ಅರ್ಥಪೂರ್ಣ ಹಾಗೂ ಬಹಳ ಮಹತ್ವ ಪಡೆಯುತ್ತದೆ. ಅದಕ್ಕೆ ಸಾಕ್ಷಿ ಪಡ್ಲಾಡಿ ಮೊಸರು ಕುಡಿಕೆ ಕಾರ್ಯಕ್ರಮವಾಗಿದೆ ಎಂದು ನಡ ಪೌಢ ಶಾಲಾ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ವಸಂತಿ.ಜಿ.ಭಟ್ ಕುಳಮರ್ವ ಹೇಳಿದರು.
ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾೈಲ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದಲ್ಲಿ ಮಾತನಾಡಿದರು.
ಬೆಳಗ್ಗೆ ಕ್ರೀಡಾಕೂಟ ಆನಂದ ಪೂಜಾರಿ, ಜೋಕಿಂ ಸಿಕ್ವೇರಾ, ಗ್ರಾಪಂ ಅಧ್ಯಕ್ಷೆ ಜಯಂತಿ ಎಂ.ಕೆ.ಸದಸ್ಯೆ ಜಯಂತಿ ಅನ್ನಡ್ಕ, ಹಾಲು ಉತ್ಪಾದಕ ಸಂಘ ಅಧ್ಯಕ್ಷ ಗಿರಿಧರ ಪೂಜಾರಿ, ಉತ್ಸಾಹಿ ಯುವಕ ಮಂಡಲ ಅಧ್ಯಕ್ಷ ಹರ್ಷಿತ್ ಎಲ್.ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.
ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷಗಳಿಂದ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ರಾಜೇಶ್ವರಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಚಂದ್ರಿಕಾ ಅವರನ್ನು ಸನ್ಮಾನಿಸಲಾಯಿತು.
ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ರವಿಚಂದ್ರ ನಾಡೆಂಜ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್, ಅಂಬೇಡ್ಕರ್ ಉಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.
ಗೌರವಾಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಪ್ರಸ್ತಾವಿಸಿ ಸ್ವಾಗತಿಸಿ. ಜಯಾನಂದ ಅಂಕಾಜೆ ಹಾಗೂ ವಿನಯ್ ಎಂ.ಎಸ್.ನಿರೂಪಿಸಿದರು. ಸಮಿತಿ ಕಾರ್ಯದರ್ಶಿ ಅನಿಲ್ ವಿಕ್ರಂ ಡಿಸೋಜಾ, ಕೋಶಾಧಿಕಾರಿ ಸಂತೋಷ್ ಸಿಕ್ವೆರಾ ಹಿಮರಡ್ಡ, ಪದಾಧಿಕಾರಿಗಳು, ಸದಸ್ಯರು, ಊರವರು ಸಹಕರಿಸಿದರು.