More

    ಕೆರೆ, ಕೊಳವೆಬಾವಿಗಳಲ್ಲಿನ ನೀರಿನ ಸಂಗ್ರಹಮಟ್ಟ ಪರೀಕ್ಷಿಸಿ

    ಮಾನ್ವಿ: ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ದನ-ಕರುಗಳಿಗೆ ಮೇವಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಹಂಪಯ್ಯ ನಾಯಕ ಸೂಚಿಸಿದರು.

    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಮೇವು ಸಂಗ್ರಹಣೆ ಕುರಿತ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಶನಿವಾರ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೆರೆಗಳು ಮತ್ತು ಕೊಳವೆ ಬಾವಿಗಳಲ್ಲಿ ನೀರಿನ ಸಂಗ್ರಹಮಟ್ಟ ಪರೀಕ್ಷಿಸಬೇಕು. ಕೊಳವೆಬಾವಿಗಳಲ್ಲಿ ತಾಂತ್ರಿಕ ಸಮಸ್ಯೆ ಇದ್ದರೆ ಸರಿಪಡಿಕೊಳ್ಳಬೇಕು ಎಂದು ಸೂಚಿಸಿದರು.

    ಬೇಸಿಗೆಯಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ಮಾ.5 ರಿಂದ ಮಾ.16 ರವರೆಗೆ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರನ್ನು ಬಿಡಲಾಗುತ್ತದೆ. ಮಾನ್ವಿ ಹಾಗೂ ಸಿರವಾರ ತಾಲೂಕಿನಲ್ಲಿನ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಬೇಕು. ಡಿಸ್ಟ್ರಿಬ್ಯೂಟರ್ 72, 76, 84, 92 ಸೇರಿ ಇತರ ಕಾಲುವೆಗಳ ಮೂಲಕ ಕೆರೆಗಳನ್ನು ತುಂಬಿಸಿಕೊಳ್ಳುವುದಕ್ಕೆ ಗ್ರಾಪಂ, ತಾಪಂ ಮತ್ತು ಪುರಸಭೆ ಅಧಿಕಾರಿಗಳು ಮಾಹಿತಿ ನೀಡಿದಲ್ಲಿ ಜಿಲ್ಲಾಧಿಕಾರಿಯೊಂದಿಗೆ ಚರ್ಚೆಸಿ ಅಗತ್ಯ ಪ್ರಮಾಣದಲ್ಲಿ ನೀರು ಬಿಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಬರಗಾಲ ನಿರ್ವಹಣೆಗೆ ಸಂಬಂಧಿಸಿದಂತೆ ಮಾನ್ವಿ ಮತ್ತು ಸಿರವಾರ ತಾಲೂಕಿನಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ 50 ಲಕ್ಷ ರೂ. ನೀಡಲಾಗಿದೆ. ತಾಲೂಕಿನಲ್ಲಿ ನೀರಾವರಿ ಅನುಕೂಲವಿರುವ ರೈತರಿಗೆ ಮೇವು ಬೆಳೆಯಲು ಪಶು ಇಲಾಖೆಯಿಂದ ಮೇವಿನ ಬೀಜಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

    ಸಿರವಾರ ತಾಲೂಕಿನಲ್ಲಿ 2 ಹಾಗೂ ಮಾನ್ವಿ ಎಪಿಎಂಸಿ, ಅರೋಲಿಯಲ್ಲಿ ಮೇವಿನ ಬ್ಯಾಂಕ್‌ಗಳನ್ನು ಆರಂಭಿಸಿ ಮೇವು ಸಂಗ್ರಹಣೆಗೆ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳು ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕ ಹಂಪಯ್ಯ ನಾಯಕ ತಿಳಿಸಿದರು.

    ನೀರಾವರಿ ಇಲಾಖೆ ಎಇಇ ವಿಜಯಲಕ್ಷ್ಮೀ ಪಾಟಿಲ್ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ತುಂಗಭದ್ರಾ ಜಲಾಶಯದಿಂದ ಮಾ.5 ರಿಂದ ಮಾ.16 ರವರೆಗೆ ಪ್ರತಿದಿನ 1200 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಈ ಪೈಕಿ 700 ಕ್ಯೂಸೆಕ್ ನೀರನ್ನು ಗಣೆಕಲ್ ಜಲಾಶಯಕ್ಕೆ ಹರಿಸಲಾಗುವುದು. ಮಾನ್ವಿ ಮತ್ತು ಸಿರವಾರ ತಾಲೂಕಿನ ಕಾಲುವೆಗಳಿಗೆೆ 3 ದಿನ ನೀರು ಹರಿಸಲಾಗುವುದರಿಂದ ಈ ಅವಧಿಯಲ್ಲಿ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts