17.8 C
Bengaluru
Wednesday, January 22, 2020

ಐತಿಹಾಸಿಕ ಕೆರೆ ಅಭಿವೃದ್ಧಿಗೆ ಮಧುರಖಂಡಿ ಗ್ರಾಮಸ್ಥರ ಪಣ

Latest News

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 27ರಿಂದ

ಹಾವೇರಿ: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ. 27 ಹಾಗೂ 28ರಂದು...

ಕಾರಿಗೆ ಬೆಂಕಿ, ಜನರು ಪಾರು

ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಧಾರವಾಡ-ಗೋವಾ ರಸ್ತೆಯ ಹೊನ್ನಾಪುರ ಬಳಿ ಮಂಗಳವಾರ ಸಂಭವಿಸಿದೆ....

ಸಂಗಮೇಶ ಬಿರಾದಾರ ಜಮಖಂಡಿ(ಗ್ರಾ): ಒತ್ತುವರಿ ಹಾಗೂ ಅಭಿವೃದ್ಧಿ ನೆಪದಲ್ಲಿ ಕಾಣೆಯಾಗುತ್ತಿರುವ ಕೆರೆಗಳಿಂದಾಗಿ ಅಂತರ್ಜಲ ಕುಸಿದು ನೀರಿನ ಸಮಸ್ಯೆ ತಲೆದೋರುತ್ತಿದ್ದರೂ ಅವುಗಳ ರಕ್ಷಣೆಗೆ ಸರ್ಕಾರಗಳು ಇನ್ನೂ ಗಂಭೀರ ಚಿಂತನೆ ನಡೆಸಿಲ್ಲ. ಏತನ್ಮಧ್ಯೆ ತಾಲೂಕಿನ ಮಧುರಖಂಡಿ ಗ್ರಾಮದ ಹಳೆಯ ಕೆರೆಯೊಂದು ಧರ್ಮಸ್ಥಳ ಟ್ರಸ್ಟ್ ಸಹಯೋಗ ಹಾಗೂ ಗ್ರಾಮಸ್ಥರ ನೆರವಿನಿಂದ ಸದ್ದಿಲ್ಲದೆ ಪುನರುಜ್ಜೀವನಗೊಳ್ಳು ತ್ತಿರುವುದು ಪರಿಸರ ಪ್ರೇಮಿಗಳಲ್ಲಿ ಆಶಾಕಿರಣ ಮೂಡಿಸಿದೆ.

ಕಲ್ಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಬಲಬದಿಗೆ ಹೊಂದಿಕೊಂಡಿರುವ 150 ವರ್ಷಗಳಷ್ಟು ಹಳೆಯದಾದ 4 ಎಕರೆ 10 ಗುಂಟೆ ವಿಸ್ತೀರ್ಣದ ತಾಲಾವ ಹೆಸರಿನ ಕೆರೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಮುದಾಯ ಅಭಿವೃದ್ಧಿ ಯೊಜನೆಯಡಿ 7 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ಹಂತ ಹಂತವಾಗಿ ಅಭಿವೃದ್ಧಿ: ಕೆರೆಯನ್ನು ಅಭಿವೃದ್ಧಿಗೊಳಿಸುವ ಹೊಣೆ ಹೊತ್ತುಕೊಂಡಿರುವ ಟ್ರಸ್ಟ್ ಹಾಗೂ ಗ್ರಾಮಸ್ಥರು ಮೊದಲ ಹಂತದಲ್ಲಿ ಕೆರೆಯಲ್ಲಿರುವ ಹೂಳು ಎತ್ತುವ ಕಾರ್ಯ ಕೈಗೊಂಡಿದ್ದಾರೆ. ನಂತರ ಕೆರೆ ಪಕ್ಕದ ಜಿಎಲ್​ಬಿಸಿ ಕಾಲುವೆ ದುರಸ್ತಿಗೊಳಿಸಿ ಕೆರೆಗೆ ಸುಗಮವಾಗಿ ನೀರು ಹರಿಯುವ ವ್ಯವಸ್ಥೆ ಮಾಡಲಿದ್ದಾರೆ. ಎರಡನೇ ಹಂತದಲ್ಲಿ ಕೆರೆ ಸುತ್ತಮತ್ತ ಬೇಲಿ ಅಳವಡಿಸಿ ಸಸಿ ನೆಡುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿದ್ದಾರೆ.

ಹೂಳಿಗೆ ಬೇಡಿಕೆ: ಕೆರೆಯಲ್ಲಿ ಸಂಗ್ರಹವಾಗಿರುವ ಹೂಳಿಗೆ ಬೇಡಿಕೆ ಇದ್ದು, ಅದನ್ನು ರೈತರು ತಮ್ಮ ಜಮೀನುಗಳಲ್ಲಿ ಹಾಕಲು ಒಂದು ಟ್ರೇಲರ್ ಮಣ್ಣಿಗೆ 100 ರೂ. ನೀಡಿ ಒಯ್ಯುತ್ತಿದ್ದಾರೆ. ಕೆರೆ ಅಭಿವೃದ್ಧಿ ಕಮಿಟಿ ಹೂಳು ಮಾರಾಟದಿಂದ ಅಂದಾಜು 8 ಲಕ್ಷ ರೂ. ಸಂಗ್ರಹಿಸುವ ಗುರಿ ಹಾಕಿಕೊಂಡಿದ್ದು, ಇದರ ಜತೆಗೆ ಗ್ರಾಮ ಪಂಚಾಯಿತಿ ವತಿಯಿಂದ 2.50 ಲಕ್ಷ ರೂ. ಅನುದಾನ ಪಡೆದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವ ನಿರ್ಧಾರವನ್ನು ಗ್ರಾಮಸ್ಥರು ತೆಗೆದುಕೊಂಡಿದ್ದಾರೆ.

ಮಂಟೂರು ಮಾದರಿಯಲ್ಲಿ ಕೆರೆ ಅಭಿವೃದ್ಧಿ : ಮುಧೋಳ ತಾಲೂಕಿನ ಮಂಟೂರ ಗ್ರಾಮದ ಕೆರೆ ಮಾದರಿಯಲ್ಲಿ ಮಧುರಖಂಡಿ ಕೆರೆಯನ್ನು ಅಭಿವೃದ್ಧಿಗೊಳಿಸಿ ಗ್ರಾಮಸ್ಥರು ಅದನ್ನು ಪ್ರವಾಸಿ ತಾಣವಾಗಿ ಮಾಡುವ ಗುರಿ ಹೊಂದಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...