More

    ಕೆರೆ ತುಂಬಿಸಲು 518 ಕೋಟಿ ರೂ.ಬಿಡುಗಡೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ

    ಹೊನ್ನಾಳಿ (ದಾವಣಗೆರೆ ಜಿಲ್ಲೆ): ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರದಿಂದ 518 ಕೋಟಿ ರೂ. ಬಿಡುಗಡೆ ಮಾಡಿಸಿದ್ದು, ಆಗಲೇ ಕಾಮಗಾರಿಗೆ ಚಾಲನೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

    ತಾಲೂಕಿನ ಹನುಮಸಾಗರ ಗ್ರಾಮದ ಬಳಿ ತುಂಗಭದ್ರಾ ನದಿ ತಟದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಹಣ ಬಿಡುಗಡೆ ಮಾಡಿದ್ದರಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

    ತುಂಗಭದ್ರಾ ನದಿ ಮೇಲ್ಭಾಗದಲ್ಲಿ ಬರುವ ಹಳ್ಳಿಗಳ ಕೆರೆಗಳನ್ನು ತುಂಬಿಸಲು 460 ಕೋಟಿ ರೂ. ಹಾಗೂ ಕೆಳಭಾಗದ ಹಳ್ಳಿಗಳ ಕೆರೆಗಳನ್ನು ತುಂಬಿಸುವ ಬೆನಕನಹಳ್ಳಿ ಏತ ನೀರಾವರಿಗೆ 58 ಕೋಟಿ ರೂ. ಸೇರಿ ಒಟ್ಟು 518 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದರು.

    ಟೆಂಡರ್ ಶೀಘ್ರ:

    ಗೋವಿನಕೋವಿ ಗ್ರಾಮದ ಬಳಿ ತುಂಗಭದ್ರಾ ನದಿ ದಡದಿಂದ ಕೆರೆ ತುಂಬಿಸಲು 258 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ಕಾಮಗಾರಿ ಚಾಲನೆಯಲ್ಲಿದ್ದು, ವಿದ್ಯುದ್ದೀಕರಣ ಹಾಗೂ ಭೂ ಪರಿಹಾರಕ್ಕಾಗಿ 20 ಕೋಟಿ ರೂ. ಮತ್ತು ಕೆರೆಗಳ ಪುನಶ್ಚೇತನಕ್ಕೆ 70 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts