ವಿಜಯವಾಣಿ ಸುದ್ದಿಜಾಲ ಬೆಳ್ವೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಪುನಶ್ಚೇತನ ಕಾರ್ಯದಿಂದ ಜಲಮೂಲಗಳಲ್ಲಿ ನೀರಿನ ಹರಿವು ಹೆಚ್ಚಲು ಪೂರಕವಾಗಿದೆ ಎಂದು ಬೆಳ್ವೆ ವಲಯದ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ ಹೇಳಿದರು.
ಅಲ್ಬಾಡಿ ಭಾರಮಕ್ಕಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೇತೃತ್ವದಲ್ಲಿ ಬೆಳ್ವೆ ಗ್ರಾಮ ಪಂಚಾಯಿತಿ, ಭಾರಮಕ್ಕಿ ಕೆರೆ ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯರ ಸಂಯುಕ್ತ ಆಶ್ರಯದಲ್ಲಿ ಪುನಶ್ಚೇತನಗೊಳಿಸಲಾದ ಕೆರೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೆಳ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ, ಸದಸ್ಯ ಕರುಣಾಕರ ಶೆಟ್ಟಿ ಅಲ್ಬಾಡಿ, ಪಿಡಿಒ ಪ್ರಭಾಶಂಕರ್ ಪುರಾಣಿಕ್, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಉಪಾಧ್ಯಕ್ಷ ಬಿ.ಹರೀಶ್ ಕಿಣಿ, ಭಾರಮಕ್ಕಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿನಕರ ಶೆಟ್ಟಿ ಗುಡ್ಡಿಮನೆ, ಅರ್ಚಕ ಶ್ರೀನಾಥ ಭಟ್, ಬೆಳ್ವೆ ಶ್ರೀ ಶಂಕರನಾರಾಯಣ ದೇವಳದ ಮೊಕ್ತೇಸರ ಬಿ.ಶಂಕರ ಶೆಟ್ಟಿ, ಪ್ರಗತಿಪರ ಕೃಷಿಕ ಕೃಷ್ಣ ನಾಯ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ, ಬೆಳ್ವೆ ವಲಯ ಒಕ್ಕೂಟದ ಅಧ್ಯಕ್ಷ ಕೃಷ್ಣ ಪುತ್ರನ್ ಆರ್ಡಿ, ಅಲ್ಬಾಡಿ ವಲಯ ಒಕ್ಕೂಟದ ಅಧ್ಯಕ್ಷ ರವಿಚಂದ್ರ ನಾಯ್ಕ, ಕೃಷಿ ಅಧಿಕಾರಿ ಉಮೇಶ್ ಬಿ.ಕೆ., ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ, ಮಹಿಳೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ಉಮೇಶ್ ಬಿ.ಕೆ. ಸ್ವಾಗತಿಸಿದರು. ಮಂಜುನಾಥ ಮರೂರು ಪ್ರಾರ್ಥಿಸಿದರು. ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರಶಾಂತ್ ಗುಮ್ಮೋಲ ವಂದಿಸಿದರು.