More

    ಕೆರೆಕಟ್ಟೆಗಳು ಮುಚ್ಚಿದರೆ ನೀರಿಗೆ ಹಾಹಾಕಾರ ಖಚಿತ

    ಚನ್ನಗಿರಿ: ಕೆರೆಕಟ್ಟೆಗಳು ಗ್ರಾಮಗಳ ಜೀವನಾಡಿ ಇದ್ದಂತೆ. ಕೆರೆಗಳಿದ್ದರೆ ಮಾತ್ರ ಅಂತರ್ಜಲ ಹೆಚ್ಚಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಕೆರೆಕಟ್ಟೆಗಳ ಉಳಿವಿಗೆ ಕೈಜೋಡಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ತಿಳಿಸಿದರು.

    ತಾಲೂಕಿನ ಗುಡ್ಡದಕುಮಾರನಹಳ್ಳಿ ಗ್ರಾಪಂ ವ್ಯಾಪ್ತಿಯ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಬುಧವಾರ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

    ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಕೆರೆಕಟ್ಟೆಗಳನ್ನು ಒತ್ತುವರಿ ಮಾಡುವ, ಮುಚ್ಚುವ ಕೆಲಸ ಮಾಡುತ್ತಿದ್ದಾನೆ. ಇದರಿಂದ ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರ ಏರ್ಪಡುವುದು ನಿಶ್ಚಿತ ಎಂದರು.

    ಈ ನಿಟ್ಟಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯದ ಎಲ್ಲ ಗ್ರಾಮಗಳಲ್ಲಿ ವಿಶೇಷ ಆಸಕ್ತಿ ವಹಿಸಿ ಕೆರೆ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತಾ ಬಂದಿದ್ದಾರೆ. ಅಭಿವೃದ್ಧಿಪಡಿಸಿ ಗ್ರಾಮಸ್ಥರಿಗೆ ಹಸ್ತಾಂತರಿಸುವ ಕಾರ್ಯ ಧರ್ಮಸ್ಥಳ ಸಂಸ್ಥೆ ಮಾಡುತ್ತದೆ. ಅದನ್ನು ನೀವು ಉಳಿಸಿಕೊಂಡು ಹೋಗಬೇಕು ಎಂದು ಹೇಳಿದರು.

    ಗ್ರಾಪಂ ಅಧ್ಯಕ್ಷೆ ಜಾನಿಬಾಯಿ ಹಾಲೇಶ್‌ನಾಯ್ಕ ಉದ್ಘಾಟಿಸಿದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಎಚ್. ಮಂಜುನಾಥ್, ಎ.ವಿ. ಅಜಿತ್‌ಕುಮಾರ್, ಕೆರೆ ಅಭಿಯಂತರ ಹರೀಶ್, ತಿಪ್ಪೇಶ್, ಪಿಡಿಒ ಅಣ್ಣಪ್ಪ, ಗ್ರಾಪಂ ಸದಸ್ಯ ಓಂಕಾರಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts