More

    ಕೃಷ್ಣ ಮಠ ಲಕ್ಷದೀಪೋತ್ಸವ ಆರಂಭ

    ಉಡುಪಿ: ಕೃಷ್ಣ ಮಠದಲ್ಲಿ ಭಾಗೀರಥಿ ಜಯಂತಿಯಂದು ಗರ್ಭಗುಡಿ ಸೇರಿದ ಕೃಷ್ಣನ ಉತ್ಸವಮೂರ್ತಿ ನಾಲ್ಕು ತಿಂಗಳ ಬಳಿಕ ಮತ್ತೆ ರಥವನ್ನೇರಿ ರಾಜಬೀದಿಯಲ್ಲಿ ಭಕ್ತರಿಗೆ ದರ್ಶನ ಸಿಕ್ಕಿದೆ. ಉತ್ಥಾನ ದ್ವಾದಶಿ ಅಂಗವಾಗಿ ಶುಕ್ರವಾರ ಲಕ್ಷದೀಪೋತ್ಸವದೊಂದಿಗೆ ರಥೋತ್ಸವ ಆರಂಭಗೊಂಡಿದೆ.

    ಮಧ್ಯಾಹ್ನ 3.30ಕ್ಕೆ ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಮಠಾಧೀಶರು ಹಣತೆ ಮುಹೂರ್ತ ನೆರವೇರಿಸಿದರು. ರಾತ್ರಿ ಮಠದಲ್ಲಿ ಉತ್ಸವ ಮುಹೂರ್ತ ಕಾಲದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನ ನಡೆಯಿತು. ನವಗ್ರಹ ಪೂಜೆ, ನವಗ್ರಹ ದಾನದ ನಂತರ ರಥೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಮಹಾಪೂಜಾ ರಥದಲ್ಲಿ ಅನಂತೇಶ್ವರ ಚಂದ್ರೇಶ್ವರ ದೇವರ ಮೂರ್ತಿ ಮತ್ತು ಗರುಡ ರಥದಲ್ಲಿ ಕೃಷ್ಣ ದೇವರು, ಪ್ರಾಣ ದೇವರ ಮೂರ್ತಿಯನ್ನು ಇಟ್ಟು ಮೆರವಣಿಗೆ ನಡೆಸಲಾಯಿತು.

    ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ, ಕೃಷ್ಣಾಪುರ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಹಾಗೂ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಪಾಲ್ಗೊಂಡಿದ್ದರು. ಹುಣ್ಣಿಮೆವರೆಗೆ ಲಕ್ಷದೀಪೋತ್ಸವ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts