ಬಪ್ಪನಾಡಿನಲ್ಲಿ ಲಕ್ಷ ಕುಂಕುಮಾರ್ಚನೆ

New Project (22)
Published on

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವದ ಪ್ರಯುಕ್ತ ಲಕ್ಷ ಕುಂಕುಮಾರ್ಚನೆ ಇತ್ತೀಚೆಗೆ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ಅವರಿಂದ ವಿಶೇಷ ಪ್ರಾರ್ಥನೆ, ದೀಪ ಪ್ರಜ್ವಲನೆ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಲಕ್ಷ ಕುಂಕುವಾರ್ಚನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾರ್ವಜನಿಕ ಶನಿ ಪೂಜೆ, ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.

ದೇವಸ್ಥಾನದ ಆನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸ, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಶಿವಶಂಕರ್ ಸಹಿತ ಭಕ್ತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net