More

    ಜನಪರ ಆಡಳಿತ ನೀಡದ ಮಹಾ ಸಿಎಂ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕೆ

    ಉಡುಪಿ: ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡಿದ್ದು, ಜನಪರ ಆಳ್ವಿಕೆ ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಮಹಾರಾಷ್ಟ್ರ ಜನರ ಗಮನ ಬೇರೆಡೆ ಸೆಳೆಯಲು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.

    ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೋವಿಡ್ ಸಂದರ್ಭ ಜನಪರ ಆಳ್ವಿಕೆ ನೀಡಲು ಅಲ್ಲಿನ ಸರ್ಕಾರ ವಿಫಲವಾಗಿತ್ತು. ಮಹಾರಾಷ್ಟ್ರದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನ ಮಾಡಲಾಗುತ್ತಿದೆ. ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡಿಸುತ್ತೇನೆ ಎಂದರು. ಬೆಳಗಾವಿ ನಮ್ಮ ರಾಜ್ಯದ ಎರಡನೆಯ ರಾಜಧಾನಿ ಅನ್ನೋದು ಹೆಮ್ಮೆಯ ವಿಚಾರ. ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿ ರಾಜ್ಯದಿಂದ ಕೆಲವು ಹೆಸರುಗಳನ್ನು ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣೆಗೆ ದಿನಾಂಕ ಘೋಷಣೆಯಾಗಿಲ್ಲ. ಬಿಜೆಪಿ ಗೆಲ್ಲಬೇಕು ಅಂದರೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts