More

    ನಾನು ಕಿತ್ತೂರು ರಾಣಿಯ ವಂಶಸ್ಥೆ: ಕುಕ್ಕರ್ ನೆನಪಿಸಿದ ಜಾರಕಿಹೊಳಿಗೆ ಹೆಬ್ಬಾಳ್ಕರ್ ಎಚ್ಚರಿಕೆ!

    ಬೆಳಗಾವಿ: ‘ಹೆಬ್ಬಾಳ್ಕರ್ ನೀಡಿದ್ದ ಕುಕ್ಕರ್ ಇನ್ನೂ ಚೆನ್ನಾಗಿದೆಯಾ’ ಎಂದು ಕಿಚಾಯಿಸಿದ್ದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಿಟ್ಟಾಗಿದ್ದಾರೆ. ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಲ್ಲದೆ, ಚುನಾವಣೆ ಆಯೋಗಕ್ಕೂ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

    ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಈ ರೀತಿ ಟೀಕಿಸಿದ್ದರು. ಅಲ್ಲದೆ, ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದಿದ್ದರು. ಕಳೆದ ಚುನಾವಣೆ ವೇಳೆ ಲಕ್ಷ್ಮೀ ಬೆಂಬಲಿಗರು ಮತದಾರರಿಗೆ ಕುಕ್ಕರ್ ಹಂಚಿದ್ದು ವರದಿಯಾಗಿತ್ತು. ಇದನ್ನೂ ಓದಿ: ಆಸ್ಪತ್ರೆಯ ಹುಳುಕು ತೋರಿಸಿದ್ದೇ ಪ್ರಾಣ ಕಸಿಯಿತೆ? ಪತ್ರಕರ್ತನ ಸಾವಿಗೆ ಟ್ವಿಸ್ಟ್‌

    ಜಾರಕಿಹೊಳಿ ಹೇಳಿಕೆ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಹೆಬ್ಬಾಳ್ಕರ್ ‘‘ನಾವು ನಮ್ಮ ಹರ್ಷ ಶುಗರ್ಸ್ ಆರಂಭೋತ್ಸವದ ಸಂದರ್ಭದಲ್ಲಿ ಪ್ರಚಾರಕ್ಕಾಗಿ ಅಧಿಕತವಾಗಿಯೇ ಕುಕ್ಕರ್ ವಿತರಿಸಿದ್ದೇವೆ. ಇದಕ್ಕೆ ಎಲ್ಲ ಲೆಕ್ಕ ಹಾಗೂ ದಾಖಲೆ ಇದೆ. ಜಿಎಸ್‌ಟಿ ಕೂಡ ತುಂಬಿದ್ದೇವೆ. ರಮೇಶ ಜಾರಕಿಹೊಳಿ ದುಡ್ಡಿನಿಂದ ನಾವು ಕುಕ್ಕರ್ ವಿತರಿಸಿದ್ದರೆ ಅದಕ್ಕೆ ಅವರೇ ಸೂಕ್ತ ದಾಖಲೆ ಮತ್ತು ಲೆಕ್ಕ ಕೊಡಲಿ. ಈ ವಿಷಯ ನ್ಯಾಯಾಲಯದಲ್ಲಿದೆ. ಆ ಕುರಿತು ಮಾತನಾಡುವುದು ನ್ಯಾಯಾಂಗ ನಿಂದನೆಯಾಗುತ್ತದೆ. 2-3 ದಿನದಲ್ಲಿ ಬೆಂಗಳೂರಿಗೆ ತೆರಳಿ ಕಾನೂನು ಕ್ರಮದ ಕುರಿತು ನಮ್ಮ ವಕೀಲರೊಂದಿಗೆ ಚರ್ಚಿಸುತ್ತೇನೆ. ರಮೇಶ ಜಾರಕಿಹೊಳಿ ತಾವು ಸಚಿವರಾದ ತಕ್ಷಣ ಏನು ಬೇಕಾದರೂ ಮಾತನಾಡಬಹುದು ಅಂತ ತಿಳಿದಂತಿದೆ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ‘‘ಗೋಕಾಕದ ಜನರು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎನ್ನುವ ಕಾರಣಕ್ಕೆ ಇವರಿಗೆ ಮತ ನೀಡಿದ್ದಾರೆಯೇ ವಿನಾ ಇವರ ಮುಖ ನೋಡಿ ಮತ ಹಾಕಿಲ್ಲ. ನಾನು ಕಿತ್ತೂರು ರಾಣಿಯ ವಂಶಸ್ಥೆ. ನನ್ನದು ಹೋರಾಟದ ರಾಜಕಾರಣ. ಬೆದರಿಕೆಗಳಿಗೆಲ್ಲ ನಾನು ಹೆದರುವವಳಲ್ಲ. ನನ್ನ ಬೆಳಗಾವಿ ತಾಲೂಕಿನ ಸ್ವಾಭಿಮಾನಿ ಜನರಿಗೋಸ್ಕರ ನನ್ನ ಹೋರಾಟ ಮುಂದುವರಿಸುತ್ತೇನೆ. ಇನ್ನಾದರೂ ರಮೇಶ ಜಾರಕಿಹೊಳಿ ತಮ್ಮ ಮದ, ಗರ್ವ, ಜಂಬ, ಅಹಂಕಾರ ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ’’ ಎಂದು ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.

    ಕೋವಿಡ್​​-19 ನೆಗೆಟಿವ್ ವರದಿ ತರದಿದ್ದರೆ ಮನೆಗೆ ನೋ ಎಂಟ್ರಿ ಎಂದ ಪತಿ.. ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts