More

    ಬಸವಣ್ಣನ ತತ್ವ ಸಿದ್ಧಾಂತದ ಮೇಲೆ ಸಚಿವ ಸ್ಥಾನ ನೀಡುತ್ತೇವೆ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಮಯ್ಯ ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಮಧ್ಯೆ, ಸಿದ್ದರಾಮಯ್ಯ ಅವರ ಮಂತ್ರಿ ಮಂಡಲದಲ್ಲಿ ಯಾವೆಲ್ಲಾ ಶಾಸಕರು ಸಚಿವರಾಗಿ ಭಡ್ತಿ ಹೊಂದಲಿದ್ದಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಯಾರಾಗಬೇಕು ಎಂಬ ಬಿಕ್ಕಟ್ಟು ಬಗೆ ಹರಿಯುತ್ತಿದ್ದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್​ನ ಕೆಲ ಪ್ರಮುಖ ನಾಯಕರು ನೂತನ ಸಚಿವರ ಪಟ್ಟಿ ಸಿದ್ದಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟ ಸೇರಲಿರುವ ಸಚಿವರ ಪಟ್ಟಿ ಇಲ್ಲಿದೆ ನೋಡಿ…

    ಜಾತಿ ನೋಡಿ ಸಚಿವ ಸ್ಥಾನ ನೀಡಲ್ಲ

    ಪ್ರದೇಶವಾರು ಹಾಗೂ ಜಾತಿ ಲೆಕ್ಕಾಚಾರದಲ್ಲಿ ಕೆಲ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದು ಎಂದು ಅಂದಾಜಿಸಲಾಗಿದೆ. ಈ ನಡುವೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಾವು ಜಾತಿ, ಸಮುದಾಯದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡುವುದಿಲ್ಲ. ಬಸವಣ್ಣನವರ ತತ್ವ-ಸಿದ್ಧಾಂತದ ಆಧಾರದ ಮೇಲೆ ನಾವು ಅಧಿಕಾರ ಹಂಚಿಕೆ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ.

    ಇದೇ ವೇಳೆ ಬೆಂಗಳೂರು ಬಿಟ್ಟರೆ ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿದೆ. 18ರ ಪೈಕಿ 11 ಸ್ಥಾನ ಗೆದ್ದಿದ್ದೇವೆ. ಹೀಗಾಗಿ ಕನಿಷ್ಠ 3 ಸಚಿವ ಸ್ಥಾನವನ್ನು ಜಿಲ್ಲೆಗೆ ನೀಡಬೇಕು ಎಂದು ಆಗ್ರಹಿಸಿದರು.

    ಇದನ್ನೂ ಓದಿ: ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ | ಇದು ನೂರಕ್ಕೆ ನೂರು ಕಾಂಗ್ರೆಸ್​ನ ಕಿತಾಪತಿ; ಕಲ್ಲಡ್ಕ ಪ್ರಭಾಕರ ಭಟ್

    ಲಕ್ಷ್ಮೀ ಹೆಬ್ಬಾಳ್ಕರ್​ಗೆ ಒಲಿಯುತ್ತಾ ಸಚಿವ ಸ್ಥಾನ?

    ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್​ನಲ್ಲಿ ಮೊದಲ ಹಂತದಲ್ಲಿ 28 ಶಾಸಕರು, ಸಚಿವರಾಗಿ ಪ್ರಮಾಣ ವಚನ ಸ್ವೀಕರಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಇತ್ತೀಚೆಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡುತ್ತಾ ನನಗೆ ಅಧಿಕಾರದ ಆಸೆ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಬಲ ಮಹಿಳಾ ಶಾಸಕಿಯಾಗಿ ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೂ ಈ ಬಾರಿ ಸಚಿವ ಸ್ಥಾನ ಒಲಿದು ಬರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಕಗಳು ತಿಳಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts