More

    ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮರಿಸಿದ ಸಿಎಂ

    ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚಾನೆ ಮಾಡಿದರು.
    ನಂತರ ಮಾತನಾಡಿದ ಸಿಎಂ, ರೈಲ್ವೆ ದುರಂತವಾದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟರು ಎಂದು ಸ್ಮರಿಸಿದರು.
    ಜೈ ಜವಾನ್ ಜೈ ಕಿಸಾನ್ ಎಂದು ಕರೆ ಕೊಟ್ಟವರು. ಆಹಾರ ಸ್ವಾವಲಂಬನೆ ಆಗದಿದ್ದ ಸಂದರ್ಭದಲ್ಲಿ ಇಡೀ ದೇಶದ ಜನ ಒಂದು ದಿನದ ಉಪವಾಸ ಮಾಡಲು ಕರೆ ಕೊಟ್ಟಿದ್ದ ಅವರು ಅಲ್ಪಾವಧಿ ಪ್ರಧಾನ ಮಂತ್ರಿ ಆಗಿದ್ದರೂ ಆಹಾರ ಸ್ವಾವಲಂಬನೆಗೆ ಪ್ರಯತ್ನ ಮಾಡಿದರು ಎಂದರು.
    ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ ಗೆದ್ದಿದ್ದರು. ಅತ್ಯಂತ ಪ್ರಾಮಾಣಿಕ ರಾಜಕಾರಣಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಪುಣ್ಯತಿಥಿಯನ್ನು ಇಡೀ ದೇಶದಲ್ಲಿ ಆಚರಿಸಲಾಗುತ್ತಿದೆ. ಅವರಿಗೆ ಗೌರವ ನಮನಗಳನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts